Breaking News
Home / ಜಿಲ್ಲೆ / ಬೆಳಗಾವಿ / ಬೆಳಗಾವಿಯಲ್ಲಿ ಕಸಾಪದಿಂದ ಸರ್ ಮಿರ್ಜಾ ಇಸ್ಮಾಯಿಲ್ ಜನ್ಮದಿನಾಚರಣೆ

ಬೆಳಗಾವಿಯಲ್ಲಿ ಕಸಾಪದಿಂದ ಸರ್ ಮಿರ್ಜಾ ಇಸ್ಮಾಯಿಲ್ ಜನ್ಮದಿನಾಚರಣೆ

Spread the love

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಲ್ಲಿ ಒಬ್ಬರಾದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನಾಚರಣೆಯನ್ನು ಬೆಳಗಾವಿಯಲ್ಲಿ ಆಚರಿಸಲಾಯಿತು.

ಬೆಳಗಾವಿಯ ನೆಹರು ನಗರದ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದಿಂದ ಸರ್.ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನಾಚರಣೆ ಆಚರಿಸಲಾಯಿತು. ಈ ವೇಳೆ ಮೈಸೂರಿನ ನಲ್ವಡಿ ಕೃಷ್ಣರಾಜ್ ಒಡೆಯರ್, ಸರ್ ಎಂ.ವಿಶ್ವೇಶ್ವರಯ್ಯ ಹಾಗೂ ಸರ್ ಇಸ್ಮಾಯಿಲ್ ಮಿರ್ಜಾ ಅವರ ಭಾವಚಿತ್ರಗಳಿಗೆ ಗಣ್ಯರು ಪೂಜೆ ಸಲ್ಲಿಸಿದರು.

ಇದೇ ವೇಳೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಜಿಲ್ಲಾ ಮಹಿಳಾ ಕದಳಿ ವೇದಿಕೆ ಅಧ್ಯಕ್ಷೆ ಪ್ರೇಮಕ್ಕ ಅಂಗಡಿ ಅವರು ಮಾತನಾಡಿ ಕನ್ನಡ ನಾಡು ನುಡಿ, ಭಾμÉಗೆ ಸಂಬಂಧಿಸಿದಂತೆ ಜಾತ್ಯಾತೀತವಾಗಿ ಭಾμÉಯ ಬೆಳವಣಿಗೆಗಾಗಿ ಇಸ್ಮಾಯಿಲ್ ಅವರು ಶ್ರಮಿಸಿದ್ದರು. ಅವರ ಕಾಲದಲ್ಲಿ ಕನ್ನಡ ಸಾಹಿತ್ಯ ಪರ ಕೆಲಸಗಳು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು ಆದವು ಎಂದು ಭಾμÉಗಾಗಿ ಮತ್ತು ಕನ್ನಡ ನಾಡಿಗಾಗಿ ಅವರು ಮಾಡಿದ ಅನೇಕ ಕಾರ್ಯಕ್ರಮಗಳನ್ನು ವಿವರಿಸಿದರು.

ನಂತರ ಕನ್ನಡ ಸಾಹಿತ್ಯ ಪರಿಷತ್ತಿಗೆ ಮಿರ್ಜಾ ಇಸ್ಮಾಯಿಲ್ ಅವರ ಕೊಡುಗೆ ಕುರಿತು ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಹೆಚ್.ಆಯ್. ತಿಮ್ಮಾಪುರ ಉಪನ್ಯಾಸ ನೀಡುತ್ತಾ ಮಾತನಾಡಿ ಇಸ್ಮಾಯಿಲ್ ಅವರು ಕನ್ನಡ ಭಾμÉ ಜಾತ್ಯಾತೀತ ವಾದದ್ದು ಎಂದರು ಮುಂದೆ ಅವರು ಪರಿಷತ್ತಿಗೆ ಅನೇಕ ರೂಪುರೇμÉಗಳನ್ನು ಹಾಕಿಕೊಟ್ಟರು. ಕನ್ನಡವನ್ನು ಮೊದಲಿಗೆ ಆಡಳಿತ ಭಾμÉಯನ್ನಾಗಿ ಮಾಡುವಲ್ಲಿ ಶ್ರಮಿಸಿದರು. ಅವರು ಮೂಲತಃವಾಗಿ ಜನರಿಗೆ ನೆರವಾಗುವ ಕಾರ್ಯಗಳನ್ನು ಮಾಡಬೇಕು ಹೊರತು ಜಾತಿಗೆ ಅಂಟಿಕೊಂಡು ಇರಬಾರದು ಎಂದು ಕನ್ನಡಕ್ಕೆ ಪ್ರಾಧಾನ್ಯತೆ ನೀಡುತ್ತಾ ಕೆಲಸ ಕಾರ್ಯಗಳನ್ನು ಮಾಡಿದರು ಎಂದರು.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ