Breaking News

ಯತ್ನಾಳರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಕಾಂಗ್ರೆಸ್‌ ಪ್ರಶ್ನೆ

Spread the love

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರ ‘ಹಾವು’ ಬಿಡುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಅದು ಭ್ರಷ್ಟಾಚಾರದ ಹಾವೇ?  ಎಂದು ಕುಟುಕಿದೆ.

ಯತ್ನಾಳ ಅವರ ಹೇಳಿಕೆಯ ವರದಿಯನ್ನು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಪಕ್ಷದವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಅವರಿಗೇ ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದೆ.

 

ಯತ್ನಾಳ ಅವರ ಹೇಳಿಕೆಯ ವರದಿಯನ್ನು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಪಕ್ಷದವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಅವರಿಗೇ ತಿಳಿಯುತ್ತಿಲ್ಲ ಎಂದು ವ್ಯಂಗ್ಯವಾಡಿದೆ.

‘ಕಾಂಗ್ರೆಸ್‌ ಕಿಟಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಬಿಜೆಪಿ Vs ಬಿಜೆಪಿ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ. ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ. ಯತ್ನಾಳರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಸಿ.ಡಿ ಹಾವೇ?’ ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದೆ.

ಹುಕ್ಕೇರಿಯಲ್ಲಿ ನಡೆದ ಪಂಚಮಸಾಲಿ ಸಮಾವೇಶದಲ್ಲಿ ಮಾತನಾಡಿದ ಯತ್ನಾಳ ಅವರು ತಮ್ಮ ತಂಟೆಗೆ ಬಂದರೆ ನಿಜವಾದ ಹಾವು ಬಿಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿರುವುದು ವರದಿಯಾಗಿದೆ. ವಿಜಯಪುರದ ಮಹಾನಗರ ಪಾಲಿಕೆ ಚುನಾವಣೆಗೆ ಬೆಂಗಳೂರಿನಿಂದ ಹಣ ಬರುತ್ತಿದೆ. ಮುಧೋಳದ ಸಕ್ಕರೆ ಕಾರ್ಖಾನೆ ನಡೆಸುವವ ಒಬ್ಬ ರೊಕ್ಕ ಕಳುಹಿಸುತ್ತಿದ್ದಾನೆ ಎಂದು ಯತ್ನಾಳ ಹೇಳಿರುವುದಾಗಿ ವರದಿಯಲ್ಲಿದೆ.

 


Spread the love

About Laxminews 24x7

Check Also

ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?: ಸಿಎಂ

Spread the loveಮಂಗಳೂರು: “ಬಿಜೆಪಿಯವರು ಬಳ್ಳಾರಿಯಿಂದ ಪಾದಯಾತ್ರೆ ಮಾಡಲಿ, ಬೇಡ ಅಂದವರು ಯಾರು?. ನಾವು (ಕಾಂಗ್ರೆಸ್​) ಪಾದಯಾತ್ರೆ ಮಾಡಿರುವುದು ನಿರ್ದಿಷ್ಟ ಕಾರಣಕ್ಕೋಸ್ಕರ” …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ