Breaking News

ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ

Spread the love

ನವದೆಹಲಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ಕಾಂಗ್ರೆಸ್ ಅಧ್ಯಕ್ಷರಾಗಿ (Congress President) ಪ್ರಮಾಣ ವಚನ ಸ್ವೀಕರಿಸಿದರು.

24 ವರ್ಷಗಳ ನಂತರ ಈ ಹುದ್ದೆಯನ್ನು ಅಲಂಕರಿಸುತ್ತಿರುವ ಮೊದಲ ಗಾಂಧಿಯೇತರ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಅವರು ಪಾತ್ರರಾಗಿದ್ದಾರೆ. ಜೊತೆಗೆ ಸುಮಾರು 5 ದಶಕಗಳ ಬಳಿಕ ಕನ್ನಡಿಗರೊಬ್ಬರಿಗೆ ದೇಶದ ಅತ್ಯಂತ ಹಳೆಯ ರಾಜಕೀಯ ಪಕ್ಷವಾದ ಕಾಂಗ್ರೆಸ್‍ನ ನೇತೃತ್ವ ಸಿಕ್ಕಿದೆ.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು. ಈ ವೇಳೆ ಕಾರ್ಮಿಕನ ಮಗನಾದ ನಾನು, ಕಾಂಗ್ರೆಸ್ ಕಾರ್ಯಕರ್ತನಾಗಿದ್ದ ನನ್ನನ್ನು ಕಾಂಗ್ರೆಸ್ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ನನ್ನ ಕೆಲಸದಿಂದ, ನನ್ನ ಅನುಭವದೊಂದಿಗೆ, ಪಕ್ಷವನ್ನು ಮೇಲೆತ್ತಲು ಕೈಲಾದಷ್ಟು ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡುತ್ತೇನೆ ಎಂದು ಖರ್ಗೆ ಪ್ರಮಾಣ ವಚನ ಸ್ವೀಕರಿಸಿದರು.


Spread the love

About Laxminews 24x7

Check Also

ಪ್ರಜಾಪ್ರಭುತ್ವ ಉಳಿವಿಗೆ ದೇಶದ ಜನ ಒಂದಾಗಿ: ಮಲ್ಲಿಕಾರ್ಜುನ ಖರ್ಗೆ

Spread the love ನವದೆಹಲಿ: ಚಳಿಗಾಲದ ಅಧಿವೇಶನದ ವೇಳೆ ಸಂಸತ್ತಿನ ಉಭಯ ಸದನಗಳಿಂದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಇದು ಕೇಂದ್ರ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ