ಬೆಳಗಾವಿ: ಕಲುಷಿತ ನೀರು (Polluted Water) ಸೇವಿಸಿ 3 ದಿನಗಳ ಅಂತರದಲ್ಲಿ 50 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡಿರುವ ಘಟನೆ ಮುದೇನೂರು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ದೀಪಾವಳಿ ಸಂಭ್ರಮದಲ್ಲಿ ಇರಬೇಕಿದ್ದ ಗ್ರಾಮಸ್ಥರು ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ.
ಅಸ್ವಸ್ಥಗೊಂಡಿರುವ 50 ಕ್ಕೂ ಅಧಿಕ ಜನರು ರಾಮದುರ್ಗದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ನಳಗಳಿಗೆ ನೀರು ಪೂರೈಸುವ ಪೈಪ್‌ಲೈನ್ ಒಡೆದು ಚರಂಡಿ ನೀರು ಕುಡಿಯುವ ನೀರಿಗೆ ಸೇರ್ಪಡೆಯಾಗುತ್ತಿದ್ದು, ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾಗಿದೆ.
ಘಟನೆಗೆ ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಕೊಡಿಸುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
Laxmi News 24×7