Breaking News

ನ. 1ಕ್ಕೆ JDS ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ : H.D.K

Spread the love

ಬೆಂಗಳೂರು: 2023ರ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ಗಿಂತ ಮೊದಲೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗೋದು ಬಹುತೇಕ ಖಚಿತವಾಗಿದೆ.

ನ. 1ರಂದು ಮುಳಬಾಗಿಲಿನಲ್ಲಿ ನಡೆಯಲಿರುವ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಜೆಡಿಎಸ್‌ನ ಮೊದಲ ಪಟ್ಟಿ ರಿಲೀಸ್ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ತಿಳಿಸಿದರು.

ಜೆಪಿ ಭವನದಲ್ಲಿ ಮಾತನಾಡಿದ ಅವರು, ಈಗಾಗಲೇ 123 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಫೈನಲ್ ಆಗಿದೆ. ಕಳೆದ ವಾರ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಅಭ್ಯರ್ಥಿಗಳ ಪಟ್ಟಿಗೆ ಪೂಜೆ ಸಲ್ಲಿಸಲಾಗಿದೆ. ಪಂಚರತ್ನ ಕಾರ್ಯಕ್ರಮದ ಮೊದಲ ದಿನ ಮುಳಬಾಗಿಲಿನಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡ್ತೀವಿ ಎಂದು ಕುಮಾರಸ್ವಾಮಿ ಹೇಳಿದರು. 

ಕಾಂಗ್ರೆಸ್ (Congress)-ಬಿಜೆಪಿಗಿಂತ (BJP) ನಮ್ಮ ಪಂಚರತ್ನ ರಥಯಾತ್ರೆ ವಿಶೇಷವಾಗಿ ಇರಲಿದೆ. ಜನರ ಕಷ್ಟಗಳ ಪರಿಹಾರಕ್ಕೆ ಬಿಜೆಪಿ-ಕಾಂಗ್ರೆಸ್ ಯಾವುದೇ ಕೆಲಸ ಮಾಡಿಲ್ಲ. ಈಗ ಪಾದಯಾತ್ರೆ, ಸಂಕಲ್ಪ ಯಾತ್ರೆ ಅಂತಿದ್ದಾರೆ. ಆದರೆ ನಾವು ಪಂಚರತ್ನ ಕಾರ್ಯಕ್ರಮದಲ್ಲಿ ನಮಗೆ ಅಧಿಕಾರ ಕೊಟ್ಟರೆ ಹೇಗೆ? ಅದನ್ನು ಅನುಷ್ಠಾನ ಮಾಡ್ತೀವಿ ಅಂತ ಜನರ ಮುಂದೆ ಹೇಳಿ, ಒಂದು ಅವಕಾಶ‌ ಕೊಡಿ ಅಂತ ಮನವಿ ಮಾಡ್ತೀವಿ ಎಂದರು.


Spread the love

About Laxminews 24x7

Check Also

ಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು.

Spread the loveಧೈರ್ಯ ವಿದ್ದರೆ ಮಾತ್ರ ಯಶಸ್ಸು ಕಾಣಲು ಸಾಧ್ಯವಾಗುತ್ತದೆ ಎಂದು ಉದ್ಯಮಿ ಕಾಂಗ್ರೆಸ್ ಮುಖಂಡ ರವಿ ಕರಾಳೆ ಹೇಳಿದರು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ