Breaking News

ಬೆಳಗಾವಿ: ಕಾರ್‌ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವು

Spread the love

ಬೆಳಗಾವಿ: ಚನ್ನಮ್ಮನ ಕಿತ್ತೂರಿನಲ್ಲಿ ಮಂಗಳವಾರ ರಾತ್ರಿ ಕಿತ್ತೂರು ಉತ್ಸವದ ಕಾರ್ಯಕ್ರಮ ನೋಡಿಕೊಂಡು ಮರಳುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರ್‌ ಹರಿದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಖಾನಾಪುರ ತಾಲ್ಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33) ಹಾಗೂ ಕರೆಪ್ಪ ತಳವಾರ (36) ಮೃತಪಟ್ಟವರು.

 

ಮಂಗಳವಾರ ರಾತ್ರಿ ಗಾಯಕ ರಘು ದೀಕ್ಷಿತ್‌ ಅವರ ತಂಡದ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಬಂದಿದ್ದ ಇಬ್ಬರೂ ಊರಿಗೆ ಮರಳಲು ವಾಹನಕ್ಕೆ ಕಾಯುತ್ತಿದ್ದರು. ಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ ದಾಟುತ್ತಿದ್ದ ವೇಳೆ ವೇಗವಾಗಿ ಬಂದ್‌ ಕಾರ್‌ ಇಬ್ಬರಿಗೂ ಗುದ್ದಿತು.

ತೀವ್ರ ರಕ್ತಸ್ರಾವದಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು. ಸುತ್ತ ಸಾಕಷ್ಟು ಜನ ಸೇರಿ, ಆಂಬುಲೆನ್ಸ್‌ಗಾಗಿ ಪರದಾಡಿದರು. ಅಷ್ಟರೊಳಗೆ ಇಬ್ಬರ ಪ್ರಾಣ ಪಕ್ಷ ಹಾರಿಹೋಗಿತ್ತು ಎಂದು ಪ್ರತ್ಯಕ್ಷ್ಯದರ್ಶಿಗಳು ತಿಳಿಸಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ