Breaking News

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ 150 ಅಭ್ಯರ್ಥಿಗಳ ಪಟ್ಟಿ ಪ್ರಕಟ ಬಗ್ಗೆ ನಾಯಕರ ಮಹತ್ವದ ಚರ್ಚೆ

Spread the love

ವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ ಸಭೆ ನಡೆದಿದೆ.

ಸುನಿಲ್ ಕನಗೋಲು ವರದಿ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆಸಲಾಗಿದೆ. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಸಲಹೆ ನೀಡಲಾಗಿದೆ.

ಸುನಿಲ್ ಟೀಂ ನೀಡಿರುವ ವರದಿ ಮುಂದಿಟ್ಟುಕೊಂಡು ಕಾಂಗ್ರೆಸ್ ಪಕ್ಷದ ನಾಯಕರು ಚರ್ಚೆ ನಡೆಸಿದ್ದು, ಡಿಸೆಂಬರ್ ಒಳಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ತೀರ್ಮಾನಿಸಲಾಗಿದೆ.

ಮೊದಲ ಹಂತದಲ್ಲಿ 150 ಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲು ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ದೆಹಲಿಯ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ನಡೆದಿದ್ದ ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಭಾಗಿಯಾಗಿದ್ದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ