Breaking News

ಧೂಳಖೇಡ ಬಳಿ ಭೀಕರ ಅಪಘಾತ: ಯಾತ್ರೆಗೆ ತೆರಳುತ್ತಿದ್ದ ದಂಪತಿ ಸಾವು

Spread the love

ವಿಜಯಪುರ : ಸಕ್ಕರೆ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಬದಿಯಿಂದ ಕ್ರೂಸರ್ ಢಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಮೃತಪಟ್ಟು, ಒಂಬತ್ತು ಜನರು ಗಾಯಗೊಂಡ ದುರ್ಘಟನೆ ಸಂಭವಿಸಿದೆ.

 

ಜಿಲ್ಲೆಯ ಧೂಳಖೇಡ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಸಂಭವಿಸಿದ ಭೀಕರ ಅಪಾಯದಲ್ಲಿ ಮೃತಪಟ್ಟವರನ್ನು ಕ್ರೂಸರ್ ನಲ್ಲಿದ್ದ ಬೆಳಗಾವಿ ಜಿಲ್ಲೆ ಅಥಣಿ ಮೂಲದ ಪತಿ-ಪತ್ನಿ ಭಯ್ಯಾಜಿ ಶಿಂಧೆ (50) ಸುಮಿತ್ರಾ ಶಿಂಧೆ (45) ಎಂದು ಗುರುತಿಸಲಾಗಿದೆ.

ಕ್ರೂಸರ್ ನಲ್ಲಿ ಪ್ರಯಾಣಿಸುತ್ತಿದ್ದವರು ಅಥಣಿ ಮೂಲದವರಾಗಿದ್ದು ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು.

ದುರಂತದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಝಳಕಿ ಪೊಲೀಸರು, ಗಾಯಾಳುಗಳನ್ನು ಸೋಲಾಪುರ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೇ ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ