Breaking News

ಖರ್ಗೆಯಿಂದ ಕಾಂಗ್ರೆಸ್‌ ಉನ್ನತ ಸಮಿತಿ ರಚನೆ: ಸೋನಿಯಾ ಸೇರಿ 47 ಜನರಿಗೆ ಸ್ಥಾನ

Spread the love

ವದೆಹಲಿ: ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷರಾಗಿ ಬುಧವಾರ ಅಧಿಕಾರವಹಿಸಿಕೊಂಡಿರುವ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ್‌ ಖರ್ಗೆ, ಪಕ್ಷದ ಉನ್ನತ ಸಮಿತಿ ರಚಿಸಿದ್ದಾರೆ. ಸೋನಿಯಾ ಗಾಂಧಿ, ಮನ್‌ಮೋಹನ್‌ ಸಿಂಗ್‌, ರಾಹುಲ್‌ ಗಾಂಧಿ ಸೇರಿದಂತೆ ಪಕ್ಷದ 47 ಮಂದಿ ಪ್ರಮುಖರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.

 

ಈ ಸಮಿತಿಯು ಪಕ್ಷದ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಜಾಗದಲ್ಲಿ ಕೆಲಸ ಮಾಡಲಿದೆ. ಕಾರ್ಯಕಾರಿ ಸಮಿತಿಯ ಹೊಸ ಸದಸ್ಯರನ್ನು ಮುಂದಿನ ಎಐಸಿಸಿ ಸಭೆಯಲ್ಲಿ ಆಯ್ಕೆ ಮಾಡಲಾಗುತ್ತದೆ.

ಪಕ್ಷಕ್ಕೆ ಹೊಸ ಅಧ್ಯಕ್ಷರು ಆಯ್ಕೆಯಾದ ಬೆನ್ನಲ್ಲೇ ಇಂದು ಬೆಳಿಗ್ಗೆ ವಾಡಿಕೆಯಂತೆ ಕಾರ್ಯಕಾರಿ ಸಮಿತಿಯನ್ನು ವಿಸರ್ಜಿಸಲಾಗಿತ್ತು.

“ಕಾರ್ಯಕಾರಿ ಸಮಿತಿ ಸದಸ್ಯರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಇತರ ಪ್ರಮುಖರು ಅಧ್ಯಕ್ಷರಿಗೆ ರಾಜೀನಾಮೆ ಸಲ್ಲಿಸಿದ್ದೇವೆ’ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಹೇಳಿದ್ದರು.

ರಾಜೀನಾಮೆ ನೀಡಿದ ಪಕ್ಷದ ಎಲ್ಲ ಪ್ರಮುಖರನ್ನು ಈಗ ಹೊಸ ಸಮಿತಿಗೆ ಸೇರಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ