Breaking News

ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆ

Spread the love

ಮೂರು ದಿನಗಳ ಹಿಂದೆ ಬೆಳಗಾವಿ ತಾಲೂಕಿನ ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ಮುಳುಗಿದ್ದ ಯುವಕನ ಶವ ಪತ್ತೆಯಾಗಿದೆ.

ಹೌದು ಮಂಗಳವಾರ ಸಾಯಂಕಾಲ ಮೂವರು ಸ್ನೇಹಿತರು ದೀಪಾವಳಿ ಹಬ್ಬದ ಮೋಜು ಮಸ್ತಿ ಮಾಡುತ್ತಾ, ಅಲತಗಾದ ಕಡಿ ಮಶಿನ್ ಬಳಿಯ ಕಲ್ಲಿನ ಕ್ವಾರಿಯಲ್ಲಿ ನೀರಿಗೆ ಇಳಿದಿದ್ದರು. ಇದರಲ್ಲಿ ಅನಗೋಳದ 22 ವರ್ಷದ ಸತೀಶ ಹನಮನ್ನವರ ಎಂಬ ಯುವಕ ನೀರಿನಲ್ಲಿ ಮುಳುಗಿದ್ದ. ಈತನ ಸ್ನೇಹಿತರು ಅಕ್ಕ ಪಕ್ಕದವರಿಗೆ ವಿಷಯ ತಿಳಿಸಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಪಿಎಂಸಿ ಠಾಣೆ ಪೆÇಲೀಸರು ದೌಡಾಯಿಸಿದ್ದರು.

ಅಲ್ಲದೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಎಸ್‍ಡಿಆರ್‍ಎಫ್ ಸಿಬ್ಬಂದಿಗಳು ಕಳೆದ ಎರಡು ದಿನಗಳಿಂದ ಬೋಟ್ ಸೇರಿ ಇನ್ನಿತರ ಸಾಧನಗಳ ಮೂಲಕ ಶೋಧ ಕಾರ್ಯ ನಡೆಸಿದ್ದರು.

ಗುರುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಯುವಕನ ಶವ ಪತ್ತೆಯಾಗಿದ್ದು. ಶವವನ್ನು ಹೊರಗೆ ತೆಗೆಯಲಾಗಿದೆ. ಯುವಕನ ಶವ ನೀರಿನಲ್ಲಿ ಬಹಳ ಕೆಳಗೆ ಹೋಗಿದ್ದರಿಂದ ಶವ ಹೊರಗೆ ತೆಗೆಯಲು ವಿಳಂಬವಾಗಿದೆ ಎನ್ನಲಾಗುತ್ತಿದೆ. ಇನ್ನು ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಎಪಿಎಂಸಿ ಪೆÇಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ. ಈ ರೀತಿ ಕಲ್ಲಿನ ಕ್ವಾರಿಗಳಲ್ಲಿ ಪದೇ ಪದೇ ಇಂತಹ ಘಟನೆಗಳು ಸಂಭವಿಸುತ್ತಿವೆ. ಹೀಗಾಗಿ ಇಲ್ಲಿ ಈಜಲು ನಿರ್ಬಂಧ ವಿಧಿಸಬೇಕು. ಅಲ್ಲಿ ಎಚ್ಚರಿಕೆ ಫಲಕವನ್ನು ಅಳವಡಿಸುವ ಕೆಲಸ ಮಾಡಬೇಕಿದೆ.


Spread the love

About Laxminews 24x7

Check Also

ಪತಿಯನ್ನು ಕೊಲೆ ಮಾಡಲು ಸುಪಾರಿ ಕೊಟ್ಟಿದ್ದ ಪತ್ನಿ ಹಾಗೂ ಕೊಲೆ ಮಾಡಲು ಯತ್ನಿಸಿದ್ದ ಆರೋಪಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ

Spread the loveಕಾರವಾರ: ದಾಂಡೇಲಿ ಸಮೀಪದ ಅಂಬೇವಾಡಿ ಗಾಂವಠಾಣ ನಿವಾಸಿ ಅಂಕುಶ್​ ಸುತಾರ ಅವರ ಕೊಲೆಗೆ ಸುಪಾರಿ ಕೊಟ್ಟಿದ್ದ ಪ್ರಕರಣದಲ್ಲಿ ಅಂಕುಶ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ