Breaking News

ನ.11ರಂದು ವಿವಿಧ ಕಾರ್ಯಕ್ರಮಗಳಿಗೆ ಮೋದಿ ಚಾಲನೆ: P.M. ಜೊತೆ C.M. ವಿಡಿಯೊ ಸಂವಾದ

Spread the love

 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನ. 11ರಂದು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ನಗರಕ್ಕೆ ಬರಲಿದ್ದು, ಕಾರ್ಯಕ್ರಮಗಳ ಸಿದ್ಧತೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಅವರು ಗುರುವಾರ ವಿಡಿಯೊ ಸಂವಾದದ ಮೂಲಕ ಚರ್ಚಿಸಿದರು.

 

ಅಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ಅನಾವರಣ ಮಾಡಲಿದ್ದಾರೆ. ಬಳಿಕ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಮ್ಮ ಭೇಟಿಯ ಸಂದರ್ಭದಲ್ಲಿ ಪಾಲ್ಗೊಳ್ಳಲಿರುವ ಕಾರ್ಯಕ್ರಮಗಳ ವಿವರವನ್ನು ಮುಖ್ಯಮಂತ್ರಿಯಿಂದ ಪ್ರಧಾನಿ ಪಡೆದರು. ಅಲ್ಲದೆ, ತಮ್ಮ ಭೇಟಿಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅಡಚಣೆ ಆಗದಂತೆ ಸಿದ್ಧತೆ ಕೈಗೊಳ್ಳಲು ಸೂಚಿಸಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ