ವಿಜಯಪುರ: ಇಂಡಿ ತಾಲ್ಲೂಕಿನ ಧೂಳಖೇಡ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ನಸುಕಿನಲ್ಲಿ ಕಬ್ಬು ಸಾಗಾಟ ಮಾಡುತ್ತಿದ್ದ ಟ್ಯಾಕ್ಟರ್‌ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕ್ರೂಸರ್‌ನಲ್ಲಿದ್ದ ದಂಪತಿ ಸಾವಿಗೀಡಾಗಿದ್ದಾರೆ.
ಕ್ರೂಸರ್‌ನಲ್ಲಿದ್ದ ಇತರೆ ಒಂಬತ್ತು ಜನರಿಗೆ ಗಾಯಗಳಾಗಿದ್ದು, ಮಹಾರಾಷ್ಟ್ರದ ಸೋಲಪುರಕ್ಕೆ ಚಿಕಿತ್ಸೆಗೆ ಕಳುಹಿಸಲಾಗಿದೆ.
ಬೆಳಗಾವಿ ಜಿಲ್ಲೆ ಅಥಣಿ ಮೂಲದ ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಸಾವಿಗೀಡಾದ ದಂಪತಿ.
ಅಥಣಿ ಮೂಲದ ಇವರೆಲ್ಲರೂ ಕ್ರೂಸರ್‌ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿ ಇರುವ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದ ವೇಳೆ ಅವಘಡ ನಡೆದಿದೆ.
ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ
Laxmi News 24×7