Breaking News

ಅಪ್ಪು ಕನಸಿನ ಗಂಧದಗುಡಿ ದರ್ಶನ ಫಸ್ಟ್ ಡೇ ಫಸ್ಟ್ ಶೋಗೆ ಭರ್ಜರಿ ರೆಸ್ಪಾನ್ಸ್

Spread the love

ಬೆಂಗಳೂರು: ಪುನೀತ್‌ ರಾಜ್‌ ಕುಮಾರ್ (puneeth Raj Kumar) ಕೊನೆಯ ಚಿತ್ರ ಗಂದಧಗುಡಿ (Gandhada Gudi) ಬೆಳ್ಳಿತೆರೆಯಲ್ಲಿ ರಾರಾಜಿಸಿದೆ. ಗಂಧದಗುಡಿ ಚಿತ್ರ ಇಂದು ಆಫಿಷಿಯಲ್ ತೆರೆಕಂಡಿದೆ.

ಪರಮಾತ್ಮ’ನ ಕನಸಿನ ಕೂಸು ಬೆಳ್ಳಿ ತೆರೆಗೆ ಬಂದಿದೆ. ರಾಜ್ಯಾದ್ಯಂತ ಗಂಧದಗುಡಿ ಸಾಕ್ಷ್ಯಚಿತ್ರ ಪ್ರದರ್ಶನವಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಥಿಯೇಟರ್ ಗಳಲ್ಲಿ ಗಂಧದಗುಡಿ ಪ್ರದರ್ಶನ ಕಂಡಿದೆ. ಅಭಿಮಾನಿಗಳು ದೊಡ್ಮನೆ ಹುಡುಗನನ್ನ ಕಣ್ತುಂಬಿಸಿಕೊಂಡಿದ್ದಾರೆ. ಥಿಯೇಟರ್ ಗಳೆಲ್ಲಾ ಹೌಸ್‍ಫುಲ್ ಆಗಿದ್ದು, ಎಲ್ಲೆಲ್ಲೂ ಅಪ್ಪು ಜಾತ್ರೆ ನಡೆಯುತ್ತಿದೆ.

ಟೀಶರ್ಟ್, ಪುಲ್ ಓವರ್, ಶರ್ಟ್ ಮೇಲೆ ಅಪ್ಪು (Appu) ಭಾವಚಿತ್ರಗಳು ರಾರಾಜಿಸುತ್ತಿದೆ. ಅಪ್ಪು ಭಾವಚಿತ್ರವಿರುವ ಟೀ ಶರ್ಟ್ ಗಳನ್ನ ಹಾಕಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಗಂಧದಗುಡಿಯ ಅಪ್ಪು ನೋಡಿ ಜೈಕಾರ ಶಿಳ್ಳೆ ಹಾಕಿ ಸ್ವಾಗತಿಸಿದ್ದಾರೆ. ಅದಕ್ಕೂ ಮುನ್ನ ಗುರುವಾರ ಏರ್ಪಡಿಸಲಾಗಿದ್ದ ಪ್ರೀಮಿಯರ್ ಶೋ ಯಶಸ್ವಿಯಾಗಿ ಪ್ರದರ್ಶನಗೊಂಡಿದೆ. ನಗರದ ವಿವಿಧ ಮಲ್ಟಿಫ್ಲೆಕ್ಸ್ ಗಳಲ್ಲಿ ಪ್ರೀಮಿಯರ್ ಶೋ ನಡೆದಿದೆ. ಖಾಸಿ ಮಾಲ್ ಲ್ಲಿ ಸೆಲೆಬ್ರಿಟಿಗಳೂ ಚಿತ್ರ ವೀಕ್ಷಿಸಿದ್ದಾರೆ.

ಗಣ್ಯರನ್ನ ಖುದ್ದು ಆಹ್ವಾನಿಸಿದ್ದ ಅಶ್ವಿನಿ ಪುನೀತ್ ರಾಜ್ ಕುಮಾರ್ ಎಲ್ಲರ ಜೊತೆ ಕುಳಿತು ಚಿತ್ರ ವೀಕ್ಷಿಸಿದ್ದಾರೆ. ಇನ್ಫೋಸಿಸ್ ನ ಸುಧಾಮೂರ್ತಿ ಸೇರಿ ನಟಿ ರಮ್ಯಾ, ರಕ್ಷಿತ್, ರಿಷಬ್, ದೇವರಾಜ್, ಪ್ರಜ್ವಲ್ ದೇವರಾಜ್, ಸಂಗೀತಾ ಶೃಂಗೇರಿ ಸೇರಿ ಹಲವರು ಚಿತ್ರ ವೀಕ್ಷಿಸಿದ್ರು. ಪ್ರಕೃತಿ ಮಡಿಲಲ್ಲಿ ಅಪ್ಪು ಕಳೆದಿರುವ ಅತ್ಯದ್ಭುತ ಕ್ಷಣಗಳನ್ನ ಕಣ್ತುಂಬಿಕೊಂಡ ಅಭಿಮಾನಿಗಳು ಹಾಗೂ ಅಪ್ಪು ಆಪ್ತ ಕಲಾವಿದರು ಭಾವುಕರಾದ್ರು. ಅಪ್ಪು ಅಪ್ಪುವಾಗಿ ಜೀವಿಸಿರುವ ಚಿತ್ರ ‘ಗಂಧದಗುಡಿ’ ವೀಕ್ಷಿಸಿದ ಅಪ್ಪು ಸ್ನೇಹಿತರು ಮಂತ್ರಮುಗ್ಧರಾಗಿದ್ದಾರೆ.


Spread the love

About Laxminews 24x7

Check Also

ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ

Spread the love ಸೆಟ್ಟೇರಿತು ಮನೋರಂಜನ್ ರವಿಚಂದ್ರನ್ ಐದನೇ ಸಿನಿಮಾ..ಹೊಸ ನಿರ್ದೇಶಕರ ಜೊತೆ ಕೈ ಜೋಡಿಸಿದ ಕ್ರೇಜಿಸ್ಟಾರ್ ಪುತ್ರ ಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ