ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶುಕ್ರವಾರದಂದು ಬೆಳಗಾವಿಯ ಸುವರ್ಣಸೌಧದ ಎದುರು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಎದುರು “ಕೋಟಿ ಕಂಠ ಗೀತಗಾಯನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕದ ವೀರವನಿತೆಯ ವೇಷಭೂಷಣದಲ್ಲಿ ವಿವಿಧ ಶಾಲಾ ಮಕ್ಕಳು, ಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರು ಇದರಲ್ಲಿ ಭಾಗಿಯಾಗಿದ್ದರು.
ಸಂಸದೆ ಮಂಗಲ ಅಂಗಡಿ, ಸಚಿವ ಶಶಿಕಲಾ ಜೊಲ್ಲೆ, ಜಿಲ್ಲಾಧಿಕಾರಿ ನಿತೀಶ್ ಪಾಟೀಲ, ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ, ಎಸ್ಪಿ ಸಂಜೀವಕುಮಾರ್, ಇನ್ನುಳಿದ ಗಣ್ಯರು ಇದರಲ್ಲಿ ಭಾಗಿಯಾಗಿದ್ಧರು.
ಈ ವೇಳೆ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಹಚ್ಚೇವು ಕನ್ನಡದ ದೀಪ, ಬಾರಿಸು ಕನ್ನಡ ಡಿಂಡಿಮವಾ, ಹುಟ್ಟಿದರೇ ಕನ್ನಡನಾಡಲ್ಲಿ ಹುಟ್ಟಬೇಕು ಎಂಬು ಹತ್ತು ಹಲವಾರು ನಾಡಗೀತೆಗಳನ್ನು ಸುಶ್ರಾವ್ಯವಾಗಿ ಮಕ್ಕಳು ಹಾಡಿದರು. ಮಕ್ಕಳ ಹಾಡಿದ ನೆರೆದಿದ್ದ ಸಿಬ್ಬಂದಿಗಳು ಹೆಜ್ಜೆ ಹಾಕಿದ್ದು ಕೂಡ ವಿಶೇಷವಾಗಿತ್ತು.