Breaking News
Home / ಜಿಲ್ಲೆ / ಬೆಳಗಾವಿ / ಗೋಕಾಕ / ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿ0ದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ

ಕನ್ನಡ ಸರ್ವಶ್ರೇಷ್ಠ ಭಾಷೆ : ಸರ್ವೋತ್ತಮ ಜಾರಕಿಹೊಳಿ ಅರಭಾವಿ ಬಿಜೆಪಿ ಮಂಡಲದಿ0ದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮ

Spread the love

ಗೋಕಾಕ : ದೇಶದಲ್ಲಿಯೇ ಕನ್ನಡ ಭಾಷೆಗೆ ತನ್ನದೇಯಾದ ವಿಶಿಷ್ಟ ಇತಿಹಾಸವಿದ್ದು, ಕನ್ನಡ ಭಾಷೆ ಇಂದು ದೇಶದಲ್ಲಿ ವಿಶೇಷ ಸ್ಥಾನಮಾನ ಪಡೆದಿದೆ ಎಂದು ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು.
ಶುಕ್ರವಾರದಂದು ಇಲ್ಲಿಯ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲದಿAದ ಕನ್ನಡ ರಾಜ್ಯೋತ್ಸವದ ನಿಮಿತ್ಯ ಜರುಗಿದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕನ್ನಡ ಭಾಷೆ ಶ್ರೇಷ್ಠ ಭಾಷೆ ಎಂದು ತಿಳಿಸಿದರು.

 


ನಮ್ಮ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನೆಲ-ಜಲ, ಭಾಷೆ ವಿಷಯಕ್ಕೆ ಬಂದಾಗ ಕನ್ನಡಿಗರಾದ ನಾವು ಈ ನಾಡನ್ನು ಪ್ರೀತಿಸಿ ಗೌರವಿಸಬೇಕಾಗಿದೆ. ಕನ್ನಡ ಭಾಷೆ ಎಂದರೆ ಇಡೀ ದೇಶವೇ ನಮ್ಮತ್ತ ನೋಡುತ್ತಿದೆ. ಇದಕ್ಕೆ ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ದೊರೆತಿರುವುದು ಸಾಕ್ಷಿಯಾಗಿದೆ ಎಂದು ಹೇಳಿದರು.
ರಾಜ್ಯೋತ್ಸವದ ನಿಮಿತ್ಯ ಈ ಬಾರಿ ನಮ್ಮ ಬಿಜೆಪಿ ಸರ್ಕಾರ ವಿಜೃಂಭಣೆಯಿAದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಿ ಕನ್ನಡಿಗರಲ್ಲಿ ಉತ್ಸಾಹ, ಹುಮ್ಮಸ್ಸು ತೋರಿದೆ ಎಂದು ಅವರು ಹೇಳಿದರು.

ಶಿಕ್ಷಕ ರಾಮಚಂದ್ರ ಕಾಕಡೆ ಅವರು ಈ ಸಂದರ್ಭದಲ್ಲಿ ವಿಶೇಷ ಉಪನ್ಯಾಸ ನೀಡಿದರು.
ಇದೇ ಸಂದರ್ಭದಲ್ಲಿ ಜಯ ಭಾರತ ಜನನೀಯ ತನುಜಾತೆ, ಉದಯವಾಗಲಿ ನಮ್ಮ ಚೆಲುವು ಕನ್ನಡ ನಾಡು, ಬಾರಿಸು ಕನ್ನಡ ಡಿಮ್‌ಡಿಮ್‌ವ, ಹಚ್ಚೇವು ಕನ್ನಡದ ದೀಪ, ವಿಶ್ವವಿನೂತನ ವಿದ್ಯಾಚೇತನ ಹಾಗೂ ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಎಂಬ ಹಾಡುಗಳನ್ನು ಪ್ರಸ್ತುತಪಡಿಸಲಾಯಿತು.

ಈ ಸಂದರ್ಭದಲ್ಲಿ ಅರಭಾವಿ ಬಿಜೆಪಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಪ್ರಧಾನ ಕಾರ್ಯದರ್ಶಿಗಳಾದ ಪರಸಪ್ಪ ಬಬಲಿ, ಮಹಾಂತೇಶ ಕುಡಚಿ, ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಜಿಲ್ಲಾ ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಈರಪ್ಪ ಢವಳೇಶ್ವರ, ಯುವಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿ, ಎಸ್‌ಸಿ ಮೋರ್ಚಾ ಅಧ್ಯಕ್ಷ ನಾಗರಾಜ ಕುದರಿ, ಕಮಲಾದೇವಿ ಬಡಗಾಂವಿ, ಪ್ರೇಮಾ ಭಂಡಾರಿ, ಲಕ್ಷಿö್ಮÃ ಮಾಳೇದ, ರವಿ ಪರುಶೆಟ್ಟಿ, ಶಿವಾನಂದ ಮರಕುಂಬಿ, ಪಾಂಡು ಮಹೇಂದ್ರಕರ, ಸಿದ್ದು ಕಂಕಣವಾಡಿ, ರಮೇಶ ಹರಿಜನ, ಪರಪ್ಪ ಹಡಪದ, ಕೇದಾರಿ ಬಸ್ಮೆ, ಸಿದ್ದು ದುರದುಂಡಿ, ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಭುವನೇಶ್ವರಿ ಭಾವಚಿತ್ರಕ್ಕೆ ಸರ್ವೋತ್ತಮ ಜಾರಕಿಹೊಳಿ ಮತ್ತು ನಾಗಪ್ಪ ಶೇಖರಗೋಳ ಜಂಟಿಯಾಗಿ ಪೂಜೆ ಸಲ್ಲಿಸಿದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ