ಕಾರ್ಮಿಕ ಕಾರ್ಡ್ ಮಾಡಿಕೊಂಡ ಕಾರ್ಮಿಕರಿಗೆ ಮತ್ತು ಅವರ ಮಕ್ಕಳಿಗೆ ಸರ್ಕಾರ ಆದೇಶಿಸಿದರೂ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಇಂದು ಬೆಳಗಾವಿಯಲ್ಲಿ ಕಟ್ಟಡ ಕಾರ್ಮಿಕರು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯದೆದುರು ಪ್ರತಿಭಟನೆ ನಡೆಸಿದರು.
ಶುಕ್ರವಾರದಂದು ಬೆಳಗಾವಿ ಜಿಲ್ಲಾಧಿಕಾರಿ ಕಾರ್ಯಾಲಯಕ್ಕೆ ಆಗಮಿಸಿದ ಕಾರ್ಮಿಕ ಕಾರ್ಡ್ ಮಾಡಿಕೊಂಡ ಕಾರ್ಮಿಕರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡದಿರುವ ಸರ್ಕಾರದ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಈ ವಿಷಯದ ಮನವಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.
ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಮುಖಂಡ ಕಲ್ಯಾಣ ಕಾರ್ಮಿಕ ಮಂಡಳಿಯ ಸೌಲಭ್ಯಗಳಿಗಾಗಿ ಬೆಳಗಾವಿ ಜಿಲ್ಲೆಯಲ್ಲಿ ೨ ಲಕ್ಷಕ್ಕೂ ಅಧಿಕ ಜನ ಕಟ್ಟಡ ಕಾರ್ಮಿಕ ಕಾರ್ಡ್ ಮಾಡಿಕೊಂಡಿದ್ದಾರೆ. ಆದರೇ ೧ ವರ್ಷದಿಂದ ಅರ್ಜಿಗಳನ್ನು ಹಾಕಿದರೂ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಸಿಎಂ ಆದೇಶ ಬಂದರೂ ಸಹಿತ ಬಸ್ ಪಾಸ್ ನೀಡಲಾಗುತ್ತಿಲ್ಲ. ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಲ್ಯಾಪಟಾಪ್ ಮತ್ತು ೩೭ ಲಕ್ಷ ಕಾರ್ಮಿಕರಿಗೆ ಬಸ್ ಪಾಸ್ ನೀಡಿ. ಕಿಟ್‌ಗಳನ್ನು ಬೆಂಗಳೂರಿನಿAದ ತರಿಸದೇ ಕಾರ್ಮಿಕರ ಖಾತೆಗೆ ಹಣ ವರ್ಗಾಯಿಸಿ ಕಿಟ್ ಖರೀದಿಸಲು ಅನುವು ಮಾಡಿಕೊಟ್ಟು, ಭ್ರಷ್ಟಾಚಾರ ನಿಲ್ಲಿಸಬೇಕು ಎಂದು ಎನ್ ಆರ್ ಲಾತೂರ ಹೇಳಿದರು.
ಬಿಎಚ್‌ಎಮ್‌ಎಸ್ ಕಲಿಯುತ್ತಿರುವ ವಿದ್ಯಾರ್ಥಿಯೋರ್ವಳು ಮಾತನಾಡಿ ಸಮಯಕ್ಕೆ ಸರಿಯಾಗಿ ಶಿಷ್ಯ ವೇತನ ಸಿಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯುAಟಾಗುತ್ತಿದೆ. ಕಳೆದ ಬಾರಿಯೂ ಅರ್ಜಿ ಸಲ್ಲಿಸಿದ್ದೇ ಆದರೇ ಕೆಲವರಿಗೆ ಮಾತ್ರ ಶಿಷ್ಯವೇತನ ನೀಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದಳು.