ರಾಮದುರ್ಗ (ಬೆಳಗಾವಿ ಜಿಲ್ಲೆ: ‘ಮುದೇನೂರು ಗ್ರಾಮದಲ್ಲಿ ಕಳೆದ ಒಂದು ವಾರದಿಂದ ವಾಂತಿ ಭೇದಿ ಸಮಸ್ಯೆ ತಲೆದೋರಿದೆ. ಈಗಾಗಲೇ ಇಬ್ಬರು ಸಾವನ್ನಪ್ಪಿದ್ದಾರೆ. ದಿನದಿನಕ್ಕೆ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಇಷ್ಟಾದರೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ, ಜಿಲ್ಲಾಧಿಕಾರಿ ಆಗಲಿ ಸ್ಥಳಕ್ಕೆ ಬಂದಿಲ್ಲ. ನಮ್ಮ ಕಷ್ಟ ನೋಡಿಲ್ಲ’ ಎಂದು ಹಲವರು ಆಕ್ರೋಶ ಹೊರಹಾಕಿದರು.
ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದಾಗ ಮಹಿಳೆಯರು ಸಂಕಷ್ಟ ತೋಡಿಕೊಂಡರು.
‘ಸಚಿವ ಗೋವಿಂದ ಕಾರಜೋಳ ಅವರು ಬಾಗಲಕೋಟೆಯಲ್ಲೇ ಇದ್ದಾರೆ. ಮುದೇನೀರಿಗೆ ಇದು ಬಹಳ ಹತ್ತಿರ. ಇಷ್ಟು ಹತ್ತಿರದಲ್ಲಿದ್ದರೂ ಸಚಿವ ಸ್ಥಳಕ್ಕೆ ಬಂದಿಲ್ಲ.
ವಿಡಿಯೊ ಮೂಲಕ ಪರಿಹಾರ ಘೋಷಣೆ ಮಾಡುತ್ತಿದ್ದಾರೆ. ಇದರಿಂದ ನಮ್ಮ ಜೀವ ಉಳಿಯುತ್ತದೆಯೇ?’ ಎಂದೂ ಮಹಿಳೆಯರು ಬೇಸರ ವ್ಯಕ್ತಪಡಿಸಿದರು.
Laxmi News 24×7