ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಪ್ರತಿಯೊಬ್ಬರಿಗೂ ಬದುಕು ಕಟ್ಟಿಕೊಳ್ಳಲು, ಆರ್ಥಿಕ ಮತ್ತು ಸಾಮಾಜಿಕ ಭದ್ರತೆ ನೀಡುವ ಮೂಲಕ ಭಾರತದಲ್ಲೇ ನಂಬರ್ 1 ರಾಜ್ಯ ಮಾಡುವ ಛಲವನ್ನು ತೊಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕೋಟಿ ಕಂಠ ಗಾಯನ ಕಾರ್ಯಕ್ರಮದ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಇನ್ನಷ್ಟು ಶಕ್ತಿಶಾಲಿಯಾಗಿ ಹೊರ ಹೊಮ್ಮಲು ಎಲ್ಲ ಕನ್ನಡಿಗರೂ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.
ಕನ್ನಡನಾಡು ಶ್ರೇಷ್ಠವಾದ ನಾಡು ಮತ್ತು ನಿಸರ್ಗಭರಿತ ನಾಡು. ಕಾಡು, ನದಿ ಮೂಲ, ಹಲವು ರೀತಿಯ ಕೃಷಿ ವಲಯಗಳಿಂದ ಕೂಡಿರುವ ರಾಜ್ಯ. ಅತ್ಯುತ್ತಮ ಮಾನವ ಸಂಪನ್ಮೂಲವನ್ನು ಹೊಂದಿರುವ ಪ್ರಗತಿಪರ ಮತ್ತು ಅಗ್ರ ಶ್ರೇಣಿಯ ರಾಜ್ಯವಾಗಿದೆ ಎಂದು ಬೊಮ್ಮಾಯಿ ಹೇಳಿದರು.