Breaking News

ಅಂಗವೈಕಲ್ಯದ ಮಧ್ಯೆಯೂ ಕ್ರೀಡಾ ಕ್ಷೇತ್ರದಲ್ಲಿ ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ

Spread the love

ಬೆಳಗಾವಿಯ ಈಜುಪಟು ರಾಘವೇಂದ್ರ ಅಣ್ವೇಕರ್‌ಗೆ ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿ: ಇಲ್ಲಿನ ಸಹ್ಯಾದ್ರಿ ನಗರದ ನಿವಾಸಿ, ಅಂಗವಿಕಲ ಈಜುಪಟು ರಾಘವೇಂದ್ರ ರತ್ನಾಕರ ಅಣ್ವೇಕರ್‌(35) ಕ್ರೀಡಾ ಕ್ಷೇತ್ರದ ಸಾಧನೆಗಾಗಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಅವರು ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವರು.

ಎಂ.ಎ(ರಾಜ್ಯಶಾಸ್ತ್ರ) ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. 2014ರಿಂದ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗುಮಾಸ್ತರಾಗಿ ಕೆಲಸ ಮಾಡುತ್ತಿದ್ದಾರೆ. 14ನೇ ವಯಸ್ಸಿನಿಂದ ಈಜು ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿರುವ ಅವರು, ಹಾಂಕಾಂಗ್‌, ಮಲೇಷ್ಯಾ, ಡೆನ್ಮಾರ್ಕ್‌ ಮತ್ತಿತರ ದೇಶಗಳಲ್ಲಿ ನಡೆದ ಅಂತರರಾಷ್ಟ್ರೀಯ ಈಜು ಟೂರ್ನಿಗಳಲ್ಲಿ 28, ರಾಷ್ಟ್ರಮಟ್ಟದ ಟೂರ್ನಿಗಳಲ್ಲಿ 100 ಪದಕಗಳನ್ನು ಗಳಿಸಿದ್ದಾರೆ.

2010ರಲ್ಲಿ ಚೀನಾದಲ್ಲಿ ನಡೆದ ಏಷ್ಯನ್‌ ಗೇಮ್ಸ್‌ನ 200 ಮೀ. ವೈಯಕ್ತಿಕ ಮೆಡ್ಲೆ ವಿಭಾಗದಲ್ಲಿ ಕಂಚಿನ ಪದಕ ಗಳಿಸಿದ್ದಾರೆ. 2014ರಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರಿಂದ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿದ್ದಾರೆ.

‘ಅಂಗವೈಕಲ್ಯದ ಮಧ್ಯೆಯೂ ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆ ಗುರುತಿಸಿ, ಸರ್ಕಾರ ಪ್ರಶಸ್ತಿ ನೀಡುತ್ತಿರುವುದು ಸಂತಸ ತಂದಿದೆ. ಸತತ ಪರಿಶ್ರಮಕ್ಕೆ ಫಲ ದೊರೆತಿದೆ’ ಎಂದು ರಾಘವೇಂದ್ರ ಅಣ್ವೇಕರ್‌ತಿಳಿಸಿದರು.


Spread the love

About Laxminews 24x7

Check Also

ಬಿಜೆಪಿಗೆ ಈಶ್ವರಪ್ಪ ಕರೆತರಲು ಯತ್ನಿಸಿಲ್ಲ: ರಮೇಶ ಜಾರಕಿಹೊಳಿ

Spread the love ಬೆಳಗಾವಿ: ‘ನಾನು ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ ಕೆ.ಎಸ್.ಈಶ್ವರಪ್ಪ ಅವರನ್ನು ಮತ್ತೆ ಬಿಜೆಪಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ