ಮಾಜಿ ಸಚಿವ ರಮೇಶ ಜಾರಕಿಹೋಳಿ ಅವರು ಜೆಡಿಎಸ್‌ಗೆ ಬಂದ್ರೇ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದರು.
ಇಂದು ಭಾನುವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು. ಜೆಡಿಎಸ್ ಪಕ್ಷ ಜನರಿಗಾಗಿ ಇರುವ ಪಕ್ಷ. ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ರಮೇಶ ಜಾರಕಿಹೊಳಿ ಅಥವಾ ಯಾರು ಬರುತ್ತಾರೆಯೋ ಅಂಥವರಿಗೆ ಜಿಲ್ಲಾ ಮಟ್ಟದಲ್ಲಿನ ನಾಯಕರೊಂದಿಗೆ ರ‍್ಚೆ ಮಾಡಿ ತರ‍್ಮಾನ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸಂಘಟಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ರಾಜ್ಯಾದ್ಯಂತ ಪ್ರವಾಸ ಮಾಡುತ್ತಿದ್ದೇವೆ. ಇದರ ಜೊತೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬರುತ್ತಿದ್ದಾರೆ. ಜನರು ಸಾವಿರಾರು ಸಂಖ್ಯೆಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು.
ಜನರ ಜೊತೆಗೆ ನೇರವಾಗಿ ಸಂರ‍್ಕ ಮಾಡುತ್ತಿದ್ದೇವೆ. ಆಯಾ ವಿಧಾನಸಭಾ ಕ್ಷೇತ್ರದಲ್ಲಿ ಅಭ್ರ‍್ಥಿಯನ್ನು ಗುರುತಿಸಿ ಕೆಲಸ ಪ್ರಾರಂಭಿಸುವಂತೆ ಸೂಚನೆ ನೀಡಲಾಗಿದೆ ಎಂದರು. ಬೆಳಗಾವಿ ಸುರ‍್ಣ ವಿಧಾನಸೌಧ ಸದ್ಬಳಕೆಯಾಗಬೇಕು. ಈ ಭಾಗದ ಜನರು ಸಮಸ್ಯೆ ತೆಗೆದುಕೊಂಡು ಬೆಂಗಳೂರು ಬರುವುದು ಬೇಡ. ಇಲ್ಲಿಯೇ ಇತ್ರ‍್ಥವಾಗಬೇಕು. ರಾಜ್ಯದಲ್ಲಿ ಜೆಡಿಎಸ್ ಸರಕಾರಕ್ಕೆ ಬಂದರೆ ಇದೊಂದು ಕಾಯಕಲ್ಪ ನೀಡಲಾಗುವುದು ಎಂದರು.
ಜೆಡಿಎಸ್ ಪಕ್ಷ ಎಲ್ಲ ಸಮಾಜದವರಿಗೆ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದೆ. ರ‍್ವಜನಾಂಗದ ಶಾಂತಿಯ ತೋಟ ಎಲ್ಲರಿಗೂ ಸಮಾನವಾಗಿ ಬದುಕುವ ಹಕ್ಕಿದೆ. ರ‍್ನಾಟಕ ಸರ‍್ವಭೌಮತ್ವ ಉಳಿಸಿಕೊಳ್ಳುತ್ತೇವೆ. ಈ ಭಾರಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Laxmi News 24×7