ನವದೆಹಲಿ : ಕಾಂಗ್ರೆಸ್ ಪಕ್ಷವು ಗುಜರಾತ್ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ಬಿಜೆಪಿಯ ಡಬಲ್ ಎಂಜಿನ್ ನ ವಂಚನೆಯಿಂದ ಅವರನ್ನು ರಕ್ಷಿಸುತ್ತದೆ ಎಂದು ರಾಹುಲ್ ಗಾಂಧಿ ಅವರು ತಮ್ಮ ಭಾನುವಾರ ಹೇಳಿದ್ದಾರೆ.
500 ರೂ.ಗಳಲ್ಲಿ ಎಲ್‌ಪಿಜಿ ಸಿಲಿಂಡರ್, ಯುವಕರಿಗೆ 10 ಲಕ್ಷ ಉದ್ಯೋಗ, 3 ಲಕ್ಷದವರೆಗಿನ ರೈತರ ಸಾಲ ಮನ್ನಾ, ನಾವು ಗುಜರಾತ್‌ನ ಜನರಿಗೆ ನೀಡಿದ 8 ವಚನ’ವನ್ನು ಈಡೇರಿಸುತ್ತೇವೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
‘ಬಿಜೆಪಿಯ ‘ಡಬಲ್ ಇಂಜಿನ್’ ನ ಮೋಸದಿಂದ ಕಾಂಗ್ರೆಸ್ ನಿಮ್ಮನ್ನು ರಕ್ಷಿಸುತ್ತದೆ, ರಾಜ್ಯದಲ್ಲಿ ‘ಬದಲಾವಣೆಯ ಹಬ್ಬ’ ಆಚರಿಸುತ್ತೇವೆ’ ಎಂದು ಮಾಜಿ ಕಾಂಗ್ರೆಸ್ ಮುಖ್ಯಸ್ಥ ಹೇಳಿದ್ದಾರೆ.
ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 8 ರಂದು ಮತ ಎಣಿಕೆ ನಡೆಯಲಿದೆ. ಕಾಂಗ್ರೆಸ್, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷಗಳು ಮತದಾರರನ್ನು ಓಲೈಸಲು ಕಸರತ್ತು ಆರಂಭಿಸಿದ್ದು, ತ್ರಿಕೋನ ಸ್ಪರ್ಧೆ ಕಂಡುಬಂದಿದೆ. 2017ರ ಚುನಾವಣೆಯಲ್ಲಿ ಒಟ್ಟು 182 ಸ್ಥಾನಗಳ ಪೈಕಿ ಬಿಜೆಪಿ 99 ಮತ್ತು ಕಾಂಗ್ರೆಸ್ 77 ಸ್ಥಾನಗಳನ್ನು ಗೆದ್ದಿತ್ತು.
Laxmi News 24×7