Breaking News

ಮುರುಘಾ ಶ್ರೀ ಲೈಂಗಿಕ ಕಿರುಕುಳ ಪ್ರಕರಣ ಕುರಿತಂತೆ ಸ್ಪೋಟಕ ಮಾಹಿತಿ ಬಹಿರಂಗ; ಚಾರ್ಜ್ ಶೀಟ್ ನಲ್ಲಿದೆಯಂತೆ ಬೆಚ್ಚಿ ಬೀಳಿಸುವ ಸಂಗತಿ.!

Spread the love

ಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಈಗಾಗಲೇ ಜೈಲು ಪಾಲಾಗಿದ್ದಾರೆ. ಅವರ ವಿರುದ್ಧ ಈಗ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ಮತ್ತೆ ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 

ಇದರ ಮಧ್ಯೆ ವಿಚಾರಣೆ ವೇಳೆ ಲೈಂಗಿಕ ಕಿರುಕುಳಕ್ಕೊಳಗಾದ ಬಾಲಕಿಯರು ಪೊಲೀಸರ ಮುಂದೆ ಬೆಚ್ಚಿ ಬೀಳಿಸುವ ಸಂಗತಿ ಬಿಚ್ಚಿಟ್ಟಿದ್ದಾರೆ ಎನ್ನಲಾಗಿದ್ದು, ಇದೆಲ್ಲವೂ ಚಾರ್ಜ್ ಶೀಟ್ ನಲ್ಲಿ ಉಲ್ಲೇಖವಾಗಿದೆಯಂತೆ. ಸ್ವಾಮೀಜಿಯ ಎಲ್ಲ ಕುಕೃತ್ಯಗಳಿಗೆ ವಾರ್ಡನ್ ಸಾಥ್ ನೀಡುತ್ತಿದ್ದಳು ಎನ್ನಲಾಗಿದ್ದು, ಆಕೆಯೂ ಕೂಡ ಈಗ ಜೈಲಿನಲ್ಲಿದ್ದಾಳೆ.

ಮುರುಘಾ ಮಠದ ಸ್ವಾಮೀಜಿ ಲೈಂಗಿಕ ಬಯಕೆ ವ್ಯಕ್ತಪಡಿಸಿದಾಗಲ್ಲೆಲ್ಲ ವಾರ್ಡನ್ ರಶ್ಮಿ ಹುಡುಗಿಯರನ್ನು ಸಪ್ಲೈ ಮಾಡುತ್ತಿದ್ದಳು ಎನ್ನಲಾಗಿದ್ದು, ವಿರೋಧಿಸಿದರೆ ಅಂತಹ ಬಾಲಕಿಯರಿಗೆ ಇನ್ನಿಲ್ಲದಂತೆ ಹಿಂಸೆ ನೀಡುತ್ತಿದ್ದಳು ಎಂದು ಹೇಳಲಾಗಿದೆ. ಕೆಲವೊಮ್ಮೆ ಪ್ರಜ್ಞೆ ತಪ್ಪುವ ಔಷಧ ನೀಡಿ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ.

ಕತ್ತಲಾಗುತ್ತಿದ್ದಂತೆ ತಮ್ಮ ಲೈಂಗಿಕ ಬಯಕೆ ಈಡೇರಿಸಿಕೊಳ್ಳಲು ಸ್ವಾಮೀಜಿ ಬಾಲಕಿಯರಿಗೆ ಚಾಕೊಲೇಟ್ ಆಮಿಷವೊಡ್ಡಿ ತಮ್ಮ ಕೋಣೆಗೆ ಕರೆಯಿಸಿಕೊಳ್ಳುತ್ತಿದ್ದರಂತೆ. ಈ ಚಾಕೊಲೇಟ್ ತಿನ್ನುತ್ತಿದ್ದಂತೆ ಬಾಲಕಿಯರು ಪ್ರಜ್ಞೆ ತಪ್ಪಿದ ಬಳಿಕ ಅವರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು ಎನ್ನಲಾಗಿದೆ. ವಾರದಲ್ಲಿ ದಿನಕ್ಕೊಮ್ಮೆ ಓರ್ವ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು ಎಂದು ಹೇಳಲಾಗಿದೆ. ಚಾರ್ಜ್ ಶೀಟ್ ಸಂಪೂರ್ಣವಾಗಿ ಸಲ್ಲಿಕೆಯಾದ ಬಳಿಕ ಇದರ ವಿವರ ಗೊತ್ತಾಗಲಿದೆ.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ