Breaking News

ಸಿದ್ದರಾಮಯ್ಯ ಅವರು ಭ್ರಮೆಯಲ್ಲಿದ್ದಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the love

ಡುಪಿ: ಜನ ಕಾಂಗ್ರೆಸನ್ನು ಗೆಲ್ಲಿಸುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ ಎಂದರು.

ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 

ಕಾಂಗ್ರೆಸ್ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಐದು ವರ್ಷ ಆಡಳಿತ ಮಾಡಿದಾಗಲೂ ನಾವೇ ಗೆಲ್ಲುತ್ತೇವೆ ಎನ್ನುತ್ತಿದ್ದರು. ಯಡಿಯೂರಪ್ಪ ಹಾಗೂ ಎಚ್.ಡಿ ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗುವುದಿಲ್ಲ ಎನ್ನುತ್ತಿದ್ದರು. 77 ಸ್ಥಾನಗಳಿಗೆ ಬಂದುನಿಂತರು. ಅಧಿಕಾರ ನಡೆಸಿ ಕಾರ್ಯಕ್ರಮಗಳನ್ನು ಕೊಟ್ಟಾಗಲೇ, ಜನ ತಿರಸ್ಕಾರ ಮಾಡಿದ್ದಾರೆ. ಒಡೆದು ಆಳುವ, ಸಮಾಜ ಒಡೆಯುವ ನೀತಿ, ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿರುವುದನ್ನು ಜನ ಮರೆತಿಲ್ಲ. ಅವರು ಹೇಳಿದ್ದಕ್ಕೆ ತಲೆಕೆಡಿಸಿಕೊಳ್ಳಬೇಕಿಲ್ಲ ಎಂದರು.

ಕರಾವಳಿಯಲ್ಲಿ ಹೆಚ್ಚಿನ ಹೂಡಿಕೆ: ನವೀಕರಿಸಬಹುದಾದ ಇಂಧನ, ವಿಶೇಷವಾಗಿ ಹೈಡ್ರೋಜನ್ ಇಂಧನ, ಅಮೋನಿಯಾ ಕರಾವಳಿ ಪ್ರದೇಶದಲ್ಲಿಯೇ ಹೆಚ್ಚಿದ್ದು, ಮಂಗಳೂರು ಮತ್ತು ಉಡುಪಿ ಪ್ರದೇಶದಲ್ಲಿ ಹೂಡಿಕೆಯ ನಿರೀಕ್ಷೆಯಲ್ಲಿದ್ದೇವೆ ಎಂದರು.

ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಸುಳ್ಳು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ 50 ವರ್ಷ ಸಂಪೂರ್ಣ ಭ್ರಷ್ಟ ಸರ್ಕಾರವನ್ನೇ ನಡೆಸಿದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ