ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ಹೋಗಿರುವ ರಸ್ತೆಗಳನ್ನು ದುರಸ್ತಿ ಮಾಡುವಂತೆ ರಸ್ತೆ ತಡೆದು ಕರವೇ ಕಾರ್ಯಕರ್ತರು ಪ್ರತಿಭಟನೆಯನ್ನು ಮಾಡಿ ಆಕ್ರೋಶವನ್ನು ಹೋರಹಾಕಿದರು.
ಕೆಲಹೊತ್ತು ಚಿಕ್ಕೋಡಿ-ಮಿರಜ ರಸ್ತೆ ತಡೆದು ಪ್ರತಿಭಟನೆಯನ್ನು ನಡೆಸಿದರು. ಕರವೇ ಜಿಲ್ಲಾ ಸಂಚಾಲಕ ಸಂಜು ಬಡಿಗೇರ ಹಾಗೂ ಸಮಾಜ ಸೇವಕ ಚಂದ್ರಕಾಂತ ಹುಕ್ಕೇರಿ ಇವರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು. ಚಿಕ್ಕೋಡಿ ಪಟ್ಟಣದಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತೆ ಮಾಡುವಂತೆ ಆಗ್ರಹಿಸಿದರು. ಪಟ್ಟಣದಲ್ಲಿ ಹೊಸ ರಸ್ತೆಗಳನ್ನು ಮಾಡದೇ ಇದ್ದರೂ ಪರವಾಗಿಲ್ಲ ಹಳೇ ರಸ್ತೆಗಳಲ್ಲಿರುವ ಗುಂಡಿಗಳನ್ನ ದುರಸ್ತಿ ಮಾಡಿಕೊಡಿ. ಈ ರಸ್ತೆಗಳಲ್ಲಿ ಸಂಚರಿಸುವ ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ಎದುರಾಗಿದೆ.