Breaking News
Home / ರಾಜಕೀಯ / ಸಿದ್ದರಾಮಯ್ಯ ಯಾರನ್ನೂ ಬೆಳೆಯಲು ಬಿಟ್ಟಿಲ್ಲ:C.M

ಸಿದ್ದರಾಮಯ್ಯ ಯಾರನ್ನೂ ಬೆಳೆಯಲು ಬಿಟ್ಟಿಲ್ಲ:C.M

Spread the love

ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿರುವ ಜನ ಸಂಕಲ್ಪ ಯಾತ್ರೆಯನ್ನು ಸಿಎಂ ಬೊಮ್ಮಾಯಿಯವರು ಉದ್ಘಾಟಿಸಿಮಾತನಾಡಿದರು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸರ್ಕಾರ ಬಹಳಷ್ಟು ಕೊಡುಗೆ ನೀಡಿದೆ. ಕರಾವಳಿಗರ ಬಹುದಿನಗಳ ಬೇಡಿಕೆಯಾಗಿದ್ದ ಸಿ.ಆರ್.ಝೆಡ್ ನಿಯಮಗಳಿಗೆ ತಿದ್ದುಪಡಿ ತಂದಿದೆ. ಸಾಗರ್ ಮಾಲಾ ಯೋಜನೆಗೆ 1774 ಕೋಟಿ ಅನುದಾನ ನೀಡುವ ಮೂಲಕ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದೆ ಎಂದರು.

ಇಂದು ಸಾಮಾಜಿಕ ನ್ಯಾಯ ಭಾಷಣದ ಸರಕಾಗಿದೆ. ಕಾಂಗ್ರೆಸ್ ಪಕ್ಷ ಕೆಲವು ಸಮುದಾಯಗಳನ್ನು ಕೇವಲ ಭಾಷಣದಿಂದಲೇ ಹೊಟ್ಟೆ ತುಂಬಿಸುತ್ತಾ ಬಂದಿದೆ. ಸಿದ್ದರಾಮಯ್ಯ ಅವರಂತಹ ನಾಯಕರು ಸಾಮಾಜಿಕ ನ್ಯಾಯದ ಹೆಸರಿನಲ್ಲಿ ತಾವೇ ಮುಂದುವರಿದಿದ್ದಾರೆಯೇ ಹೊರತು ಯಾರನ್ನೂ ಬೆಳೆಯಲು ಬಿಟ್ಟಿಲ್ಲ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ಕನ್ನಡ ನಾಡಿನ ಜನತೆಯ ಸಮಗ್ರ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ. ಮೀನುಗಾರರಿಗೆ ಅಗತ್ಯವಿರುವ ಹೆಚ್ಚುವರಿ ಸೀಮೆಎಣ್ಣೆ ಒದಗಿಸಲು ನಮ್ಮ ಸರ್ಕಾರ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ ಹಾಗೂ ಮೀನುಗಾರರಿಗೆ ಸುಸಜ್ಜಿತ ಮನೆ ನಿರ್ಮಿಸಿಕೊಡುವ ಕಾರ್ಯ ಈಗಾಗಲೇ ಪ್ರಗತಿಯಲ್ಲಿದೆ ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.


Spread the love

About Laxminews 24x7

Check Also

ರಕ್ಷಾ ಬಂಧನ ದಿನಾಂಕ, ಶುಭ ಸಮಯ, ಮಹತ್ವವನ್ನು ತಿಳಿಯಿರಿ

Spread the love ರಕ್ಷಾ ಬಂಧನ ಸಹೋದರ ಸಹೋದರಿಯರ ನಡುವಿನ ಪ್ರೀತಿಯ ಸಂಕೇತವಾಗಿದೆ. ರಕ್ಷಾ ಬಂಧನ ಹಬ್ಬವನ್ನು ಪ್ರತಿ ವರ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ