ಅಂತೂ ಇಂತೂ ಕೊನೆಗೂ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ರಸ್ತೆ, ಚರಂಡಿ ಸೇರಿ ಇನ್ನಿತರ ಅಭಿವೃದ್ಧಿಗೆ ಕಾಲ ಕೂಡಿ ಬಂದಿದ್ದು. ವಿವಿಧ ಕಾಮಗಾರಿಗಳಿಗೆ ಚಾಲನೆ ಸಿಕ್ಕಿದೆ.
ಹೌದು ಉತ್ತರ ಶಾಸಕ ಅನೀಲ್ ಬೆನಕೆ, ಜಿಲ್ಲಾಧಿಕಾರಿ ಡಾ.ನಿತೇಶ ಪಾಟೀಲ್, ಬುಡಾ ಆಯುಕ್ತ ಪ್ರೀತಮ್ ನಸಲಾಪೂರ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ ಬಾಗೇವಾಡಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದ ಸುತ್ತಲಿನ ಪ್ರದೇಶ ಹಾಗೂ ಜಿಲ್ಲಾ ಪಂಚಾಯತಿಯಿಂದ ಸರದಾರ್ಸ ಹೈಸ್ಕೂಲ್ ಕ್ಲಾಸ್‍ವರೆಗೆ ರಸ್ತೆ, ಚರಂಡಿ ಹಾಗೂ ಪೇವರ್ಸ್ ಅಳವಡಿಕೆ ಕಾಮಗಾರಿಗಳಿಗೆ ಸೋಮವಾರ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಇಲ್ಲಿ ಹದಗೆಟ್ಟ ರಸ್ತೆ ಬಗ್ಗೆ ನಮ್ಮ ಇನ್‍ನ್ಯೂಸ್ ಸಾಕಷ್ಟು ಬಾರಿ ಸುದ್ದಿ ಪ್ರಸಾರ ಮಾಡಿತ್ತು.
ಅಲ್ಲದೇ ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಎಚ್ಚೆತ್ತುಕೊಂಡಿರುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಲೋಕೋಪಯೋಗಿ ಇಲಾಖೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಒಟ್ಟು 2 ಕೋಟಿ 35 ಲಕ್ಷ ರೂಪಾಯಿಗಳ ಅನುದಾನದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕರು ಮತ್ತು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿವಾಹಕ ಅಭಿಯಂತರ ನಾಯಿಕ, ಗುತ್ತಿಗೆದಾರರಾದ ಉದಯ ಶಿವಕುಮಾರ, ಕಿಲಾರಿ ಹಾಗೂ ಇತರ ಅಧಿಕಾರಿಗಳು ಮತ್ತು ಅಲ್ಲಿನ ಸ್ಥಳೀಯರು ಉಪಸ್ಥಿತರಿದ್ದರು