Breaking News

ಮೈಸೂರಿಗೆ ಬಂದ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲು

Spread the love

ಮೈಸೂರು: ಚೆನ್ನೈ- ಬೆಂಗಳೂರು- ಮೈಸೂರು ವಂದೇಭಾರತ್ ಎಕ್ಸ್ ಪ್ರೆಸ್ ಸೋಮವಾರ ಮಧ್ಯಾಹ್ನ 12.13ಕ್ಕೆ ಮೈಸೂರಿಗೆ ಆಗಮಿಸಿತು.

ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ.

 

ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನ.11ರ ಶುಕ್ರವಾರ ಚಾಲನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ರೈಲಿನ ಪ್ರಾಯೋಗಿಕ ಸಂಚಾರವು ಸೋಮವಾರ ನಡೆಯಿತು.

ರೈಲನ್ನು ಮೊದಲ ಬಾರಿ ನೋಡುವ ಕಾತರದಲ್ಲಿ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೊಲೀಸರು ರೈಲ್ವೆ ನಿಲ್ದಾಣದ ಒಂದನೇ ಪ್ಲಾಟ್ ಫಾರ್ಮ್ ನಲ್ಲಿ ಜಮಾಯಿಸಿದ್ದರು‌.

ನೀಲಿ- ಶ್ವೇತ ಬಣ್ಣದ ರೈಲಿನ ಎಂಜಿನ್ ಕಾಣುತ್ತಿದ್ದಂತೆ ಹರ್ಷೋದ್ಗಾರ ಮುಗಿಲು ಮುಟ್ಟಿತು. ಶಿಳ್ಳೆ- ಚಪ್ಪಾಳೆಯ ಮೂಲಕ ಸ್ವಾಗತಿಸಿದರು.

ವಂದೇ ಭಾರತ್ ರೈಲನ್ನು ದೇಶೀಯವಾಗಿ ಅಭಿವೃದ್ಧಿ ಪಡಿಸಲಾಗಿದೆ. ಚೆನ್ನೈ- ಮೈಸೂರು ಮಾರ್ಗದಲ್ಲಿ ಓಡುವ ಐದನೇ ವಂದೇ ಭಾರತ್ ರೈಲು ಇದಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ