ಬಿಜೆಪಿ ಸಂಕಲ್ಪ ಯಾತ್ರೆ ವಿಫಲವಾಗಿದೆ. ಜನರು ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ಗೆ ಅಧಿಕಾರ ಕೊಡಲು ಸಂಕಲ್ಪ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ಟಾಂಗ್ ಕೊಟ್ಟರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಸಂಕಲ್ಪ ಯಾತ್ರೆಗೆ ಜನರೇ ಸೇರುತ್ತಿಲ್ಲ. ಅವರನ್ನು ಹಿಡಿದಿಡಲು ಕಾರ್ಯಕ್ರಮದ ಮುಂಭಾಗದ ಗೇಟ್ ಗಳನ್ನು ಬೀಗ್ ಹಾಕಿ ಕಟ್ಟಿಹಾಕಲು ಬಿಜೆಪಿಯವರು ವಿಫಲ ಯತ್ನ ಮಾಡುತ್ತಿದ್ದಾರೆಂದು ಟೀಕಿಸಿದರು.
ಆರ್ಥಿಕವಾಗಿ ಹಿಂದೂಳಿದ ವರ್ಗ (ಇಡಬ್ಲೂಎಸ್ ) ಗೆ ಶೇ.10 ರಷ್ಟು ಮೀಸಲಾತಿ ಕುರಿತಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪುನ್ನು ನಾನು ಇನ್ನೂ ನೋಡಿಲ್ಲ. ನೋಡಿದ ಮೇಲೆ ಪ್ರತಿಕ್ರಿಯೆ ನೀಡುತ್ತೇನೆ. ನನಗೆ ಗೊತ್ತಿರುವ ಪ್ರಕಾರ ಸಂವಿಧಾನದ ಆರ್ಟಿಕಲ್ 15 & 16 ರ ಅಡಿಯಲ್ಲಿ ಆರ್ಥಿಕವಾಗಿ, ಹಿಂದೂಳಿದವರಿಗೆ ಮೀಸಲಾತಿ ಕಲ್ಪಿಸಲು ಅವಕಾಶವಿಲ್ಲ. ಸಾಮಾಜಿಕವಾಗಿ ಹಿಂದೂಳಿದ ಮತ್ತು ಅಸ್ಪೃಶ್ಯತೆ ಹಾಗೂ ಅಸಮಾನತೆ ಮತ್ತು ಶೈಕ್ಷಣಿಕವಾಗಿ ಹಿಂದೂಳಿದ ಸಮೂದಾಯಗಳಿಗೆ ಮಾತ್ರ ಮೀಸಲು ನೀಡಬಹುದು ಎಂಬುದನ್ನು ಸಂವಿಧಾನ ಹೇಳುತ್ತದೆ ಎಂದು ಹೇಳಿದರು.
Laxmi News 24×7