Breaking News

BJP ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು : ರಾಮಲಿಂಗಾರೆಡ್ಡಿ

Spread the love

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಈ ನಗರ ಕಟ್ಟುವಾಗ ಎಲ್ಲಾ ಸಮುದಾಯದವರಿಗೂ ಅನುಕೂಲ ಆಗಲೆಂದು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ಅದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್. ಆದರೆ ನಿಮ್ಮ ಡಬಲ್ ಇಂಜಿನ್ ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ?

ಎಂಬುದಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ( KPCC working president Ramalinga Reddy ) ಅವರು ಗುಡುಗಿದ್ದಾರೆ.

 

ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮೊದಲಿಗೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುತ್ತಿರುವ ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಕರ್ನಾಟಕ ಎಂಬ ರಾಜ್ಯವಿದೆ ಎಂದು ಜ್ಞಾನೋದಯವಾಗಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದ ಪ್ರದಕ್ಷಣೆ ಆರಂಭಿಸಿದ್ದಾರೆ ಎಂದರು.

 

ರಾಜ್ಯ ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ, ಅವರು ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳಲ್ಲಿ ಯಾವುದನ್ನು ಈಡೇರಿಸಿದ್ದೀರಿ ಎಂದು ದಿನ ನಿತ್ಯ ಪ್ರಶ್ನೆ ಕೇಳುತ್ತಲೇ ಇದ್ದೇವೆ. ಆದರೆ ಅದಕ್ಕೆ ಉತ್ತರ ನೀಡುವ ಧಮ್ಮು, ತಾಕತ್ತು ನಿಮ್ಮ ಪಕ್ಷದ ಯಾರಿಗೂ ಇಲ್ಲವಾಗಿದೆ. ಹೀಗಾಗಿ ಡಬಲ್ ಇಂಜಿನ್ ಸರ್ಕಾರ ಕರ್ನಾಟಕದಲ್ಲಿ ಏನು ಸಾಧನೆ ಮಾಡಿ ಗುಡ್ಡೆ ಹಾಕಿದೆ ಎಂದು ಉತ್ತರಿಸುವ ಧಮ್ಮು, ತಾಕತ್ತು 56 ಇಂಚಿನ ಎದೆಯ, ಮಾತಿನ ಮಲ್ಲರಾದ ಪ್ರಧಾನಿ ಮೋದಿ ಅವರಿಗೆ ಇದೆ ಎಂದು ಭಾವಿಸಿ ಈ 15 ಪ್ರಶ್ನೆಗಳನ್ನು ಕೇಳ ಬಯಸುತ್ತಿದ್ದೇನೆ ಎಂದು ತಿಳಿಸಿದರು.

1. ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಕಡೆ ತಲೆ ಹಾಕದ ನಿಮಗೆ ಈಗ ಚುನಾವಣೆ ಬಂದ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನೆರೆಯಿಂದಾಗಿ
2.62 ಲಕ್ಷ ಮನೆಗಳು
1.5 ಲಕ್ಷ ಕಿ.ಮೀ ರಸ್ತೆಗಳು
30 ಸಾವಿರ ಸೇತುವೆಗಳು
54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆ ನಾಶವಾಗಿದೆ.
ಒಟ್ಟು 93,648 ಕೋಟಿ ರೂಪಾಯಿಯಷ್ಟು ನಷ್ಟವಾಗಿದ್ದು, ರಾಜ್ಯಕ್ಕೆ ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?

2. ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸುತ್ತೇವೆ ಎಂದಿದ್ದಿರಿ ನೆನಪಿದೆಯೇ? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ
– ಸ್ಮಾರ್ಟ್ ಸಿಟಿ
– ಜಲ್ ಜೀವನ ಮಿಷನ್
– 2 ಕೋಟಿ ಉದ್ಯೋಗ
– ರೈತರ ಆದಾಯ ಡಬಲ್ (2022 ಒಳಗೆ)
– ಎಲ್ಲರಿಗೂ ಸ್ವಂತ ಸೂರು (2022 ಒಳಗೆ)
ಯಾವ ಒಂದು ಯೋಜನೆ ಸಂಪೂರ್ಣವಾಗಿದೆ ಹೇಳಿ?

3. ಕೇಂದ್ರ ಸರ್ಕಾರಕ್ಕೆ ಅತಿಹೆಚ್ಚು ಜಿಎಸ್ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 2ನೇ ರಾಜ್ಯ ಎಂದು ನಿಮ್ಮದೇ ಸರ್ಕಾರ ಟ್ವೀಟ್ ಮಾಡಿತ್ತು. ಇದು ನಿಮ್ಮ ಸಾಧನೆ ಅಲ್ಲ, ಅದು ಈ ರಾಜ್ಯದ ಜನರ ಬೆವರಿನ ಪರಿಶ್ರಮ. ಆದರೆ ನೀವು ಕಲೆಹಾಕಿದ ಜಿಎಸ್ಟಿ ಹಣದಲ್ಲಿ ರಾಜ್ಯಗಳಿಗೆ ಹಂಚಿಕೆ ಆಗುವ ಅನುದಾನದ ಪಟ್ಟಿಯಲ್ಲಿ ರಾಜ್ಯಕ್ಕೆ ಎಷ್ಟನೇ ಸ್ಥಾನ ಇದೆ ಎಂದು ಹೇಳುತ್ತೀರಾ? ಆ ಮೂಲಕ ನಿಮ್ಮ ಸಾಧನೆ ಏನು ಎಂದು ಹೇಳುತ್ತೀರಾ?

4. ಮೊನ್ನೆಯಷ್ಟೇ ರಾಜ್ಯ ಪ್ರವಾಸ ಮಾಡಿ ಕಾಂಗ್ರೆಸ್ ಸರ್ಕಾರ ಮಾಡಿದ್ದ ಯೋಜನೆಗಳನ್ನು ಅನಾವರಣ ಮಾಡಿ ಕ್ಯಾಮೆರಾಗೆ ಪೋಸ್ ಕೊಟ್ಟು ಹೋದಿರಿ. ಈ ಸಂದರ್ಭದಲ್ಲಿ ಸಬ್ ಅರ್ಬನ್ ರೈಲಿಗೆ 40 ತಿಂಗಳು ಗಡವು ನೀಡಿದ್ದೀರಿ. ಈ ಯೋಜನೆಗೆ ಕೇಂದ್ರ ಬಿಡುಗಡೆ ಮಾಡಬೇಕಾಗಿದ್ದ ಹಣ ಎಷ್ಟು? ಈವರೆಗೂ ಎಷ್ಟು ಬಿಡುಗಡೆ ಮಾಡಿದ್ದೀರಿ?

5. ನೀವು ಬಂದಾಗ ನಿಮ್ಮನ್ನು ಮೆಚ್ಚಿಸಲು ಬೆಂಗಳೂರು ನಗರಕ್ಕೆ ಸಿಂಗಾರ ಮಾಡಲು ರಾಜ್ಯ ಸರ್ಕಾರ 23 ಕೋಟಿ ವೆಚ್ಚದಲ್ಲಿ ರಸ್ತೆ ಹಾಕಿದರು. ನೀವು ರಾಜ್ಯ ಬಿಡುತ್ತಿದ್ದಂತೆ ರಸ್ತೆಯ ಡಾಂಬರು ಕೂಡ ಕಿತ್ತು ಬಂದವು. ಡಬಲ್ ಇಂಜಿನ್ ಸರ್ಕಾರದ ಈ ಮಹಾನ್ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯ ಏನು?

6.ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ಭಾಷಣ ಬಿಗಿದು ನಾ ಖಾವೂಂಗಾ ನಾ ಖಾನೆದೂಂಗಾ ಎಂದ ನೀವು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ 40% ಕಮಿಷನ್ ಕುರಿತ ದೂರು, RUPSA ಸಂಸ್ಥೆ ನೀಡಿರುವ ದೂರು, ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ, ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರ ದಯಾಮರಣ ಅರ್ಜಿ ಬಗ್ಗೆ ಬಾಯಿಗೆ ಬೀಗ ಜಡಿದು ಕೊಂಡಿರುವುದು ಏಕೆ?

7. ವರ್ಷಕ್ಕೆ 2 ಕೋಟಿ ಉದ್ಯೋಗ ಎಂದವರು, ಈಗ 70 ಸಾವಿರ ನೇಮಕಾತಿಯನ್ನೇ ದೊಡ್ಡ ಸಾಧನೆ ಎಂದು ಪ್ರಚಾರ ಪಡೆಯುತ್ತಿದ್ದೀರಿ. ಪಿಎಸ್‌ಐ, ಶಿಕ್ಷಕರು, ಅರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದು ಮಾತ್ರವೇ?

8. ನಿಮ್ಮಲ್ಲಿ ಮುಖ್ಯಮಂತ್ರಿ ಕುರ್ಚಿಯನ್ನು 2500 ಕೋಟಿಗೆ, ಮಂತ್ರಿಸ್ಥಾನವನ್ನು 100 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ನಿಮ್ಮದೇ ಶಾಸಕರು ಹೇಳಿದ್ದಾರೆ. ನಿಮ್ಮ ಈ ಅಮೋಘ ಸಾಧನೆ ಬಗ್ಗೆ ಏನು ಹೇಳುತ್ತೀರಿ?


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ