Breaking News

ಈಗ ಜನ ಸಂಕಲ್ಪ ಯಾತ್ರೆ, ಮುಂದೆ ವಿಜಯ ಯಾತ್ರೆ: ಬಸವರಾಜ ಬೊಮ್ಮಾಯಿ

Spread the love

ರಾಯಬಾಗ: ‘ಈಗ ನಾವು ನಡೆಸುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಗಳು ಮುಂದಿನ ಚುನಾವಣೆಯ ಬಳಿಕ ವಿಜಯ ಯಾತ್ರೆಗಳಾಗಿ ನಡೆಯಲಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಪಟ್ಟಣದಲ್ಲಿ ಬುಧವಾರ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ’60 ವರ್ಷ ಕಾಂಗ್ರೆಸ್‌ ಆಡಳಿತವನ್ನು ಜನ ನೋಡಿದ್ದಾರೆ.

ಯಾವ ಭಾಗ್ಯವೂ ಜನರನ್ನು ಮುಟ್ಟಲಿಲ್ಲ. ಕಾಂಗ್ರೆಸ್‌ನ ದುರಾಡಳಿತ ಮತ್ತು ಅವರ ದೌರ್ಭಾಗ್ಯ ಜನರಿಗೆ ಬೇಡವಾಗಿದೆ‌’ ಎಂದರು.

‘ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಜಗಳವೇ ಇನ್ನೂ ಮುಗಿದಿಲ್ಲ. ಖರ್ಗೆ ಅವರು ಎಐಸಿಸಿಯ ಮುಳುಗುವ ದೋಣಿಯ ನಾವಿಕರಾಗಿದ್ದಾರೆ. ಅವರು ಅಧ್ಯಕ್ಷರಾದ ತಕ್ಷಣ ಶಾಸಕ ಸತೀಶ ಜಾರಕಿಹೊಳಿ ಹಿಂದೂ ಅಂದರೆ ಹೊಲಸು ಅಂತ ಹೇಳಿಕೆ ನೀಡಿದರು. ಅವರಿಗೆ ಈ ರೀತಿಯ ಮಾತನಾಡಲು ಮನಸ್ಸು ಹೇಗೆ ಬಂತು ತಿಳಿಯುತ್ತಿಲ್ಲ. ನಮ್ಮ ಸನಾತನ ಧರ್ಮ ಹುಟ್ಟಿದಾಗ ಜಗತ್ತಿನಲ್ಲಿ ಯಾವುದೇ ಧರ್ಮ ಹುಟ್ಟಿರಲಿಲ್ಲ. ಸಿಂಧೂ ಸಂಸ್ಕೃತಿ ಹಿಂದೂ ಧರ್ಮವಾಗಿ ಬೆಳೆದಿದೆ. ಇಡೀ ಮನುಕುಲವೊಂದೇ ಎಂದು ಸಾರುವ ಹಿಂದೂ ಧರ್ಮದ ಬಗ್ಗೆ ಕ್ಲುಲ್ಲಕವಾಗಿ ಮಾತನಾಡಿದ್ದಾರೆ’ ಎಂದು ಕಿಡಿ ಕಾರಿದರು.

‘ರಾಹುಲ್ ಗಾಂಧಿ ಚುನಾವಣೆ ಬಂದಾಗ ದೇವಸ್ಥಾನಕ್ಕೆ ಹೋಗುತ್ತಾರೆ.‌ ಸಿದ್ದರಾಮಯ್ಯ ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತಾರೆ. ನಮ್ಮದು ಸಮಾಜವನ್ನು ಜೋಡಿಸುವ ಕೆಲಸವಾದರೆ, ಕಾಂಗ್ರೆಸ್‌ನವರದು ಒಡೆಯುವ ಕೆಲಸ’ ಎಂದರು.

ಶಾಸಕ ಡಿ.ಎಂ. ಐಹೊಳೆ, ಸಚಿವರಾದ ಗೋವಿಂದ ಕಾರಜೋಳ, ಭೈರತಿ ಬಸವರಾಜ, ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಶಾಸಕರಾದ ಪಿ.ರಾಜೀವ, ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ, ರವಿಕುಮಾರ್, ಮಾಜಿ ಸಂಸದ ರಮೇಶ ಕತ್ತಿ, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಞ ಡಾ.ಪ್ರಭಾಕರ ಕೋರೆ ಮಾತನಾಡಿದರು.

ಸಮಾವೇಶಕ್ಕೂ ಮೊದಲು ಬೊಮ್ಮಾಯಿ ಅವರು ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ತೆರದ ವಾಹನದ ಮೂಲಕ ಮೆರವಣಿಗೆ ಮಾಡಲಾಯಿತು.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ