ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ವಿರೋಧಿಸಿದ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ನಗರದ ಚೆನ್ನಮ್ಮ ವೃತ್ತದಲ್ಲಿಂದು ವಶಕ್ಕೆ ಪಡೆದುಕೊಂಡರು.
ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಚೆನ್ನಮ್ಮ ವೃತ್ತಕ್ಕೆ ಆಗಮಿಸುತ್ತಿದ್ದಂತೆ ಮುತಾಲಿಕ್ ಸೇರಿದಂತೆ ಹಲವು ಕಾರ್ಯಕರ್ತರು ಟಿಪ್ಪು ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ಹೊರಹಾಕಿದರು.
ಇನ್ನೂ ಇದೇ ವೇಳೆ ಶ್ರೀರಾಮ ಸೇನಾ ಕಾರ್ಯಕರ್ತರು ಹಾಗೂ ಪೊಲೀಸರ ಜೊತೆಗೆ ಮಾತಿನ ಚಕಮಕಿ ನಡೆದು ನಡೆಯಿತ್ತಲ್ಲದೇ, ಟಿಪ್ಪು ವಿರುದ್ಧ ಘೋಷಣೆ ಕೂಗುತ್ತಿದ್ದ ಸಂದರ್ಭದಲ್ಲಿ ಕೆಲ ಕಾಲ ಚೆನ್ನಮ್ಮ ವೃತ್ತದಲ್ಲಿ ಬಿಗುವಿನ ವಾತಾವರಣ ಮನೆ ಮಾಡಿತ್ತು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಸೇರಿದಂತೆ ಕಾರ್ಯಕರ್ತರು ವಶಕ್ಕೆ ಪಡೆಯುತ್ತಿದ್ದಂತೆ ಚೆನ್ನಮ್ಮ ವೃತ್ತದಲ್ಲಿ ಪರಿಸ್ಥಿತಿ ಹತೋಟಿ ಬಂದಿತು.ಇನ್ನು ಇಂದು ಟಿಪ್ಪು ಸುಲ್ತಾನ್ ಜಯಂತಿ ಅಂಗವಾಗಿ ವಿವಾದಿತ ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಹು-ಧಾ ಪಾಲಿಕೆ ಸಮ್ಮತಿ ನೀಡುವ ಮೂಲಕ ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಯಾವುದೇ ಗಲಾಟೆಗೆ ಆಸ್ಪದ ನೀಡದೇ ಮುಂಜಾಗ್ರತಾ ಕ್ರಮವಾಗಿ ಈದ್ಗಾ ಮೈದಾನದಲ್ಲಿ ಪೊಲೀಸರು ಹದ್ದಿನ ಕಣ್ಣು ಮೈದಾನದ ಸುತ್ತಮುತ್ತ ನೆಟ್ಟಿದೆ.