ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಗೆ ನಡೆದಿರುವ ಸಿದ್ಧತೆ ಮತ್ತು ವ್ಯವಸ್ಥೆಯನ್ನು ಸಿಎಂ ಬೊಮ್ಮಾಯಿ ಅವರು ಪರಿಶೀಲಿಸಿದರು.
ಹೌದು ನಾಳೆ ಈ ಬೃಹತ್ ಕೆಂಪೇಗೌಡರ 108 ಅಡಿ ಎತ್ತರ ಕಂಚಿನ ಪ್ರತಿಮೆಯನ್ನು ಪ್ರಧಾನಿ ಮೋದಿ ಅವರು ಉದ್ಘಾಟಿಸಲು ಆಗಮಿಸುತ್ತಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಯಾವ ರೀತಿ ತಯಾರಿ ಆಗಿದೆ ಎಂದು ಖುದ್ದು ಸಿಎಂ ಬೊಮ್ಮಾಯಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಆರ್.ಅಶೋಕ್ ಹಾಗೂ ಮತ್ತಿತರರು ಹಾಜರಿದ್ದರು.