Breaking News

ಇಬ್ಬರು ಕುಖ್ಯಾತ ಅಂತರರಾಜ್ಯ ಮನೆಗಳ್ಳರನ್ನು ಬಂಧಿಸಿ, ಸುಮಾರು 1 ಕೋಟಿ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿಯ ಪೊಲೀಸರು ಯಶಸ್ವಿ

Spread the love

ಇಬ್ಬರು ಕುಖ್ಯಾತ ಅಂತರರಾಜ್ಯ ಮನೆಗಳ್ಳರನ್ನು ಬಂಧಿಸಿ, ಸುಮಾರು 1 ಕೋಟಿ ಮೌಲ್ಯದ ಬಂಗಾರ ಮತ್ತು ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೌದು ಬೆಳಗಾವಿ ನಗರದಲ್ಲಿ ಹಗಲಿನಲ್ಲಿಯೇ ಮನೆಗಳ ದರೋಡೆ ಬಗ್ಗೆ ಗಂಭೀರವಾಗಿ ಪರಿಗಣಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಪರಾಧ ಮತ್ತು ಸಂಚಾರ ಡಿಸಿಪಿ ಪಿ.ವ್ಹಿ.ಸ್ನೇಹಾ ಅವರ ನೇತೃತ್ವದಲ್ಲಿ ಎಸಿಪಿಗಳಾದ ನಾರಾಯಣ ಭರಮನಿ, ಚಂದ್ರಪ್ಪ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಸಿಪಿಐ ನಿಂಗನಗೌಡ ಪಾಟೀಲ್, ಕ್ಯಾಂಪ್ ಸಿಪಿಐ ಪ್ರಭಾಕರ್ ಧರ್ಮಟ್ಟಿ ಅವರನ್ನೊಳಗೊಂಡ ಒಂದು ವಿಶೇಷ ಅಪರಾಧ ಪತ್ತೆ ತಂಡವನ್ನು ರಚನೆ ಮಾಡಲಾಗಿತ್ತು. ಈ ತಂಡವು ಇಬ್ಬರು ಆರೋಪಿಗಳಾದ ಮೂಲತಃ ವಡಗಾವಿಯ ಸಧ್ಯ ಸಾಕಳಿ ಗೋವಾ ನಿವಾಸಿ ಪ್ರಕಾಶ ಪಾಟೀಲ್, ಖಾನಾಪುರ ಮೂಲದ ಸಧ್ಯ ಮಹಾರಾಷ್ಟ್ರ ರಾಜ್ಯದ ಸಿಂಧದುರ್ಗ ಜಿಲ್ಲೆಯ ವೈಭವವಾಡಿ ನಿವಾಸಿ ಮಹೇಶ ರಾಮಾ ಕಾಳಗಿನಕೊಪ್ಪ ಎಂಬುವವರನ್ನು ಬಂಧಿಸಿದ್ದಾರೆ. ಗಣೇಶಪುರ ಬಳಿ ಈ ಆರೋಪಿಗಳನ್ನು ಬಂಧಿಸಿ, ವಿಚಾರಣೆ ಮಾಡಲಾಗಿದ್ದು.

ಬೆಳಗಾವಿ ನಗರ, ಜಿಲ್ಲೆ ಹಾಗೂ ಧಾರವಾಡ ಜಿಲ್ಲೆಯ ಹಲವು ಕಡೆ ಒಟ್ಟು 22 ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.ಬೆಳಗಾವಿ ಗ್ರಾಮೀಣ ಠಾಣೆ-2, ಎಪಿಎಂಸಿ-2, ಮಾರಿಹಾಳ-2, ಖಡೇಬಜಾರ್-1, ಉದ್ಯಮಬಾಗ್-1, ಮಾಳಮಾರುತಿ-1 ಮತ್ತು ಕ್ಯಾಂಪ್-4 ಸೇರಿ ಬೆಳಗಾವಿ ನಗರದಲ್ಲಿ ಒಟ್ಟು 13 ಮನೆಗಳ್ಳತನದಲ್ಲಿ ಈ ಆರೋಪಿಗಳು ಭಾಗಿಯಾಗಿದ್ದಾರೆ. ಆರೋಪಿಗಳು ಕಳ್ಳತನ ಮಾಡಿ ಬೇರೆಯವರಿಗೆ ವಿಲೇವಾರಿ ಮಾಡಿದ 75 ಲಕ್ಷ ಮೌಲ್ಯದ 1.5 ಕೆಜಿ ಬಂಗಾರ, 3 ಲಕ್ಷ ಮೌಲ್ಯದ 4 ಕೆಜಿ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ್ದ 1 ಲಕ್ಷ 80 ಸಾವಿರ ಮೌಲ್ಯದ 1 ಬಜಾಜ್ ಡಾಮಿನರ್ ಬೈಕ್‍ನ್ನು ಜಪ್ತಿ ಮಾಡಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಆರೋಪಿಗಳನ್ನು ಬಂಧಿಸಿರುವ ಈ ವಿಶೇಷ ಅಪರಾಧ ಪತ್ತೆ ತಂಡಕ್ಕೆ ಹಿರಿಯ ಪೊಲೀಸ ಅಧಿಕಾರಿಗಳು ಅಭಿನಂದನೆ ಸಲ್ಲಿಸಿ ಬಹುಮಾನ ಘೋಷಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ