ಬೆಂಗಳೂರು : ದೇವನಹಳ್ಳಿಯ ಅಂತರರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿದರು.
ಆ ಬಳಿಕ, ಪ್ರಧಾನಿ ಜೊತೆ ನಿಂತಿದ್ದ ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಸಚಿವ ಆರ್. ಅಶೋಕ ಕೈಹಾಕಿರುವುದು ಮತ್ತು ಪ್ರಧಾನಿ ಪಕ್ಕದಲ್ಲಿ ನಿಂತು ಫೋಟೊ ತೆಗೆಸಿಕೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಒದ್ದಾಡುತ್ತಿರುವ ಚಿತ್ರಗಳನ್ನು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್. ಅಶೋಕ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ ಎಂದು ಅದು ಟೀಕಿಸಿದೆ
Laxmi News 24×7