Breaking News

ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ: ಡಿಸೆಂಬರ್‌ವರೆಗೆ ಗಡುವು‌ ನೀಡಿದ ರಾಜ್ಯ ಸರ್ಕಾರ

Spread the love

ದಾವಣಗೆರೆ: ನೌಕರರು ಡಿಸೆಂಬರ್‌ ಅಂತ್ಯದೊಳಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ರಾಜ್ಯ ಸರ್ಕಾರ ಗಡುವು ನೀಡಿದೆ.

ಈ ಸಂಬಂಧ ಆದೇಶ ಹೊರಡಿಸಿರುವ ಸರ್ಕಾರ, ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗದಿದ್ದರೆ ಸೇವಾ ಬಡ್ತಿ, ವೇತನ ಬಡ್ತಿಯನ್ನು ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

50 ವರ್ಷ ದಾಟಿದ ನೌಕರರಿಗೆ ಈ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

‘ಇತ್ತೀಚೆಗೆ ನೌಕರಿಗೆ ಸೇರಿದವರು ಕಂಪ್ಯೂಟರ್‌ ಜ್ಞಾನ ಹೊಂದಿದ್ದಾರೆ. ಆದರೆ, 20-25 ವರ್ಷಗಳ ಸೇವಾವಧಿ ಪೂರೈಸಿರುವ ಅನೇಕರು ಮೂರ್ನಾಲ್ಕು ಬಾರಿ ಪರೀಕ್ಷೆ ಬರೆದರೂ ಉತ್ತೀರ್ಣರಾಗಿಲ್ಲ. ಹಾಗಾಗಿ, ಡಿಸೆಂಬರ್‌ 31ರೊಳಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕೆಂಬ ಗಡುವನ್ನು ವಿಸ್ತರಿಸಬೇಕು’ ಎಂದು ಇಲ್ಲಿ ಹೆಡ್‌ ಕಾನ್‌ಸ್ಟೆಬಲ್‌ ಆಗಿರುವ ಎಸ್‌.ಗಿರೀಶ್‌ ಹೇಳಿದರು.

‘ಕಂಪ್ಯೂಟರ್‌ ಜ್ಞಾನ ಈಗಿನ ಕಾಲಕ್ಕೆ ಅನಿವಾರ್ಯ. ಸರ್ಕಾರಿ ನೌಕರರಿಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ ಕಡ್ಡಾಯ ಮಾಡಿದ್ದು ತಪ್ಪಲ್ಲ. ಆದರೆ, ಸೂಕ್ತ ತರಬೇತಿ ನೀಡುವ ವ್ಯವಸ್ಥೆಯಾಗಬೇಕು’ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ. ಫಾಲಾಕ್ಷಿ ಹೇಳಿದರು.


Spread the love

About Laxminews 24x7

Check Also

ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು

Spread the love ವೀರಶೈವ ಸಮಾಜ ಆಫ್ ನಾರ್ತ್ ಅಮೆರಿಕದ 47ನೇ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಆಲಮಟ್ಟಿ ಸ್ವಾಮಿಗಳು ಅಮೆರಿಕಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ