Breaking News
Home / ಜಿಲ್ಲೆ / ಬೆಂಗಳೂರು / ಯುವತಿಯ ಅತ್ಯಾಚಾರ-ಕೊಲೆ ಪ್ರಕರಣ, ಯುಪಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಿಡಿ

ಯುವತಿಯ ಅತ್ಯಾಚಾರ-ಕೊಲೆ ಪ್ರಕರಣ, ಯುಪಿ ಪೊಲೀಸರ ವಿರುದ್ಧ ಕಾಂಗ್ರೆಸ್ ಕಿಡಿ

Spread the love

ಬೆಂಗಳೂರು,- ಸಾಮೂಹಿಕ ಅತ್ಯಚಾರಕ್ಕೆ ಒಳಗಾಗಿ ಮಾರಣಾಂತಿಕ ಗಾಯಗಳಿಂದ ನರಳಿ ಜೀವ ಬಿಟ್ಟ ದಲಿತ ಯುವತಿಯ ಅಂತ್ಯಕ್ರಿಯೆಯನ್ನುಪೋಷಕರನ್ನು ಹೊರಗಿಟ್ಟು ನೆರವೇರಿಸಿದ ಪೊಲೀಸರ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯಮ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್, ಶಾಸಕ ಡಾ.ಯತೀಂದ್ರ ಅವರು ಟ್ವಿಟರ್ ಮೂಲಕ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಸಿದ್ದರಾಮಯ್ಯ ಅವರು, ಟ್ವಿಟ್ ಮಾಡಿ, ಉತ್ತರ ಪ್ರದೇಶದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಗಂಭೀರವಾದದ್ದು. ದುರ್ಮರಣಕ್ಕೀಡಾದ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ ಹೆತ್ತವರನ್ನು ಗೋಳಾಡಿಸಿದ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ.

ಇವರ ಆಡಳಿತದಲ್ಲಿ ಉತ್ತರ ಪ್ರದೇಶದಲ್ಲಿ ಯಾವ ಹೆಣ್ಣುಮಕ್ಕಳು ಸುರಕ್ಷಿತರಲ್ಲ. ದುರ್ಮರಣಕ್ಕೆ ಒಳಗಾದ ಹೆಣ್ಣು ಮಗಳ ಮುಖವನ್ನು ಕೊನೆ ಬಾರಿ ನೋಡಲು ಅವಕಾಶ ನೀಡದೆ, ಪೊಲೀಸರೇ ಮಧ್ಯ ರಾತ್ರಿ ಅಂತ್ಯಕ್ರಿಯೆ ನಡೆಸಿದ್ದಾರೆ. ಅತ್ಯಚಾರ ಪ್ರಕರಣ

ನಡೆದಾಗ ಯೋಗಿ ಸರ್ಕಾರ ತಕ್ಷಣ ಕ್ರಮ ಜರುಗಿಸಲಿಲ್ಲ. ಮೊದಲು ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾ ಮಾಡಿ ಎಂದು ಆಗ್ರಹಿಸಿದ್ದಾರೆ.ಘಟನೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಹೊಣೆಗಾರರಲ್ಲ, ಅವರನ್ನು ಬೆಂಬಲಿಸುತ್ತಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊಣೆ ಹೊರಬೇಕಾಗುತ್ತದೆ ಎಂದಿದ್ದಾರೆ.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಬಿಜೆಪಿ ಆಡಳಿತದಲ್ಲಿ ಹೆಚ್ಚುತ್ತಿವೆ. ಸಮಾಜಿಕ ವಾಸ್ತವತೆಯನ್ನು ಒಪ್ಪಿಕೊಳ್ಳಬೇಕು, ದಲಿತರ ಮೇಲಿನ ದೌಜ್ಯನ್ಯವನ್ನು ವಿರೋಸಿ ಹೋರಾಟ ನಡೆಸಬೇಕು. ಇವತ್ತು ರಾಮನಿದ್ದರೆ ಬಿಜೆಪಿಯ ರಾವಣರನ್ನು ಸುಮ್ಮನೆ ಬಿಡುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡುರಾವ್ ಟ್ವಿಟ್ ಮಾಡಿ, ಸಂಸ್ಕøತಿಯ ರಕ್ಷಕರ ಮುಖವಾಡ ಹಾಕಿಕೊಂಡಿರುವ ಬಿಜೆಪಿ ನಾಯಕರಿಗೆ ದಲಿತ ಹುಡುಗಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಕಣ್ಣಿಗೆ ಕಾಣಿಸುವುದಿಲ್ಲವೇ.

ಇದೇನಾ ನೀವು ಜನರ ಮುಂದೆ ಪ್ರತಿಪಾದಿಸುತ್ತಿರುವ ಯೋಗಿ ಮಾದರಿಯ ಆಡಳಿತ. ಅತ್ಯಾಚಾರಿಗಳ ರಾಜ್ಯ ಉತ್ತರ ಪ್ರದೇಶದಲ್ಲಿ ಹೆಣ್ಣು ಮಕ್ಕಳನ್ನು ಕಾಪಾಡುವವರು ಯಾರು ಎಂದು ಪ್ರಶ್ನಿಸಿದ್ದಾರೆ. ದುರ್ಮರಣಕ್ಕೆ ಒಳಗಾದ ಯುವತಿಯ ಅಂತ್ಯಕ್ರಿಯೆಯನ್ನು ಗೌರವಯುತವಾಗಿ ನಡೆಸಲು ಕುಟುಂಬದವರಿಗೆ ಬಿಟ್ಟಿಲ್ಲ.

ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಈ ರೀತಿಯ ಹಲವಾರು ಘಟನೆಗಳು ನಡೆದಿವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ಟ್ವಿಟರ್ ಖಾತೆಯಲ್ಲಿ ಘಟನೆಗೆ ಆಕ್ರೋಶ ವ್ಯಕ್ತ ಪಡಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದು 10 ದಿನಗಳಾದರೂ ಆರೋಪಿಗಳನ್ನು ಬಂಸಲಿಲ್ಲ. ಅಂತ್ಯಕ್ತಿಯೆಗೆ ತಂದೆ ತಾಯಿಯನ್ನು ಹತ್ತಿರ ಬಿಟ್ಟುಕೊಳ್ಳಲಿಲ್ಲ. ಪೊಲೀಸರೇ ಬಲವಂತವಾಗಿ ಅಂತ್ಯಕ್ರಿಯೆ ಮಾಡಿದ್ದಾರೆ ಎಂದು ಕಿಡಿಕಾರಿದೆ.


Spread the love

About Laxminews 24x7

Check Also

ಬಂಗಾರ ದರ ಮತ್ತೆ ಇಳಿಕೆ

Spread the love 26: ಬಂಗಾರ ದರ ನಿನ್ನೆಗೆ ಅಂದರೆ ಜೂನ್‌ 25ಕ್ಕೆ ಹೋಲಿಕೆ ಮಾಡಿದರೆ ಇಂದು (ಜೂನ್‌ 24) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ