ಬೆಳಗಾವಿಯಲ್ಲಿ ಗಾಂಜಾ ಪ್ರಕರಣದಲ್ಲಿ ವಶಕ್ಕೆ ಪಡೆದ ಆರೋಪಿ ಅನುಮಾನಾಸ್ಪದ ಸಾವನ್ನಪ್ಪಿದ ಘಟನೆ ನಡೆದಿದೆ. ಇನ್ನು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸುವುದಾಗಿ ಪೊಲೀಸ್ ಕಮಿಷ್ನರ್ ಬೋರಲಿಂಗಯ್ಯ ತಿಳಿಸಿದ್ದಾರೆ.
ಬೆಳಗಾವಿ ಗ್ರಾಮೀಣ ಪೊಲೀಸರ ವಶದಲ್ಲಿದ್ದ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ನಿವಾಸಿ ಬಸನಗೌಡ ಪಾಟೀಲ್(೪೫) ಎಂಬ ಆರೋಪಿ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿತ್ತು. ಠಾಣೆಗೆ ಕರೆದುಕೊಂಡು ಬರವಾಗ ಆರೋಗ್ಯದಲ್ಲಿ ಅಸ್ವಸ್ಥತೆ ಕಂಡಿದೆ. ತಕ್ಷಣವೇ ದಾರಿ ಮಧ್ಯೆಯೇ ಖಾಸಗಿ ಆಸ್ಪತ್ರೆ ವೈದ್ಯರಿಂದ ಚಿಕಿತ್ಸೆ ನೀಡಲಾಗಿದೆ.
ಆ ಬಳಿಕ ಮತ್ತೆ ಪೊಲೀಸ್ ಠಾಣೆಗೆ ಕರೆದುಕೊಂಡು ಹೋದಾಗ ಮತ್ತೆ ಆರೋಗ್ಯದಲ್ಲಿ ಏರುಪೇರಾದ ಕಾರಣ ತಕ್ಷಣ ಜಿಲ್ಲಾಸ್ಪತ್ರೆಗೆ ಕರೆ ತರಲಾಗಿದೆ. ಆದರೇ ಚಿಕಿತ್ಸೆ ಫಲಿಸದೇ ಆರೋಪಿಯೂ ಸಾವನ್ನಪ್ಪಿದ್ದಾರೆ. ಇನ್ನು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ನಗರ ಪೊಲೀಸ್ ಆಯುಕ್ತ ಬೋರಲಿಂಗಯ್ಯ ಅವರು ಕಸ್ಟೋಡಿಯಲ್ ಡೆತ್ ಪ್ರಕರಣ ದಾಖಲಿಸಿಕೊಂಡು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಪೊಲೀಸ್ ವಶದಲ್ಲಿ ಇರೋ ಸಂದರ್ಭದಲ್ಲಿ ಮತ್ತೆ ವಾಂತಿ, ಬೆವರು ಬಂದಿದೆ. ತಕ್ಷಣ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಹೃದಯಾಘಾತ ಆಗಿದೆ ಎಂದು ವೈದ್ಯರು ಹೇಳಿದ್ದಾರೆ .ತಕ್ಷಣ ಇಸಿಜಿ ಸೇರಿ ಚಿಕಿತ್ಸೆ ಕೊಡಿಸಿದ್ರು ಪ್ರಯೋಜನ ಆಗಿಲ್ಲ. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಬಸನಗೌಡ ಪಾಟೀಲ್ ಮೃತಪಟ್ಟಿದ್ದಾರೆ. ಮೃತನ ಹೆಂಡತಿ ಯಿಂದ ಫಿರ್ಯಾದಿ ಪಡೆದುಕೊಂಡು ಪ್ರಕರಣ ದಾಖಲಿಸಿ ಮುಂದಿನ ತನಿಖೆಗೆ ಅIಆ ಬೆಂಗಳೂರು ಗೆ ಕಳುಹಿಸಿ ಕೊಡಲಾಗುವುದು ಎಂದರು.
ಇನ್ನು ಸುಳ್ಳು ಕೇಸ್ ಹಾಕಿ ಯಾವುದೇ ಮಾಹಿತಿ ನೀಡದೇ ಪೊಲೀಸರು ಕರೆದುಕೊಂಡು ಬಂದಿದ್ದಾರೆ. ನಿನ್ನೆ ರಾತ್ರಿ ಮತ್ತೆ ಪೋನ್ ಮಾಡಿ ನಿಮ್ಮ ತಂದೆಯನ್ನ ಕರೆದುಕೊಂಡು ಹೋಗು ಅಂತಾ ಹೇಳಿದ್ದಾರೆ. ನಾನು ಆಸ್ಪತ್ರೆಗೆ ಬಂದು ನೋಡಿದಾಗ ಜೀವಂತ ಇದ್ದಾರೆ ಅಂತಾ ಹೇಳಿದ್ರು. ನಾನು ಪ್ಯಾರಾ ಮೆಡಿಕಲ್ ಸ್ಟೂಡೆಂಟ್ ಆಗಿದ್ದು ಚೆಕ್ ಮಾಡಿದಾಗ ಪಲ್ಸ್ ಸೆನ್ಸೆಷನ್ ಆಗಿರಲಿಲ್ಲ. ನನಗೆ ಡೌಟ್ ಬಂದು ಸ್ಟೇಥಸ್ಕೋಪ್ ಕೇಳಿದಾಗ ತಂದೆ ಮೃತಪಟ್ಟಿದ್ದಾರೆ ಅಂದ್ರು.