ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿಯಾದ ಪರಿಣಾಮ ೧೨ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ರಸ್ತೆಯಲ್ಲಿ ನಡೆದಿದೆ.
ಸವದತ್ತಿಯ ಕುಮಾರೇಶ್ವರ ಶಾಲೆಗೆ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆ ಬದಿಗೆ ಪಲ್ಟಿಯಾಗಿದೆ. ಕರಿಕಟ್ಟಿ-ಅಸುಂಡಿ ಗ್ರಾಮದಿಂದ ಸವದತ್ತಿ ಕುಮಾರೇಶ್ವರ ಶಾಲೆಗೆ ಬರುತ್ತಿದ್ದ ವಾಹನದಲ್ಲಿ ೩೮ ಮಕ್ಕಳು ಪ್ರಯಾಣಿಸುತ್ತಿದ್ದರು. ಇದರಲ್ಲಿ ೧೨ ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟಗಾಯಗಳಾಗಿವೆ.
ಸವದತ್ತಿ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಓರ್ವ ವಿದ್ಯಾರ್ಥಿಯನ್ನ ಧಾರವಾಡ ಜಿಲ್ಲಾಸ್ಪತ್ತೆಗೆ ರವಾಣಿಸಲಾಗಿದೆ.
ಸವದತ್ತಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.