Breaking News
Home / ಜಿಲ್ಲೆ / ತುಮಕೂರು / ವೀರಶೈವ, ಲಿಂಗಾಯತ ಒಂದೇ ನಾಣ್ಯದ ಮುಖಗಳು: ಈಶ್ವರ ಖಂಡ್ರೆ

ವೀರಶೈವ, ಲಿಂಗಾಯತ ಒಂದೇ ನಾಣ್ಯದ ಮುಖಗಳು: ಈಶ್ವರ ಖಂಡ್ರೆ

Spread the love

ತುಮಕೂರು: ಎಲ್ಲ ಧರ್ಮ, ಜಾತಿಗಳಿಗೂ ಪ್ರಪಂಚದ ಮೊದಲ ಸಂಸತ್ತು ಎನಿಸಿಕೊಂಡಿರುವ ಅನುಭವ ಮಂಟಪದಲ್ಲಿ ಅವಕಾಶ ಕಲ್ಪಿಸಿದವರು ಬಸವೇಶ್ವರರು. ಮೌಡ್ಯದಿಂದ ಸಮಾಜವನ್ನು ಹೊರತರಬೇಕೆಂಬುದು ಅವರ ಕನಸಾಗಿತ್ತು. ಇಂತಹ ಕನಸನ್ನು ನನಸು ಮಾಡಲು ನಾವೆಲ್ಲರೂ ಕಟಿಬದ್ಧರಾಗಬೇಕಿದೆ, ವೀರಶೈವ, ಲಿಂಗಾಯತ ಎಂಬುದು ಶರಣ ಸಮಾಜವೆಂಬ ಒಂದು ನಾಣ್ಯದ ಎರಡು ಮುಖಗಳು ಎಂದು ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಈಶ್ವರ ಖಂಡ್ರೆ ಹೇಳಿದರು.

 

ನಗರದ ಶ್ರೀ ಕ್ಷೇತ್ರ ಸಿದ್ಧಗಂಗಾ ಮಠದ ವಸ್ತು ಪ್ರದರ್ಶನದ ಆವರಣದಲ್ಲಿ ಅಖೀಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ವತಿಯಿಂದ ಶನಿವಾರ ಏರ್ಪಡಿಸಿದ್ದ ಬೆಂಗಳೂರು ವಿಭಾಗೀಯ ಮಟ್ಟದ ಮಹಿಳಾ ಮತ್ತು ಯುವ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗಿನ ದಿನಗಳಲ್ಲಿ ಲಿಂಗಾಯತ, ವೀರಶೈವ ಬೇರೆ ಬೇರೆ ಎಂಬ ಪ್ರತಿಪಾದನೆ ಹೆಚ್ಚಾಗಿರುವುದು ಖೇದಕರ ವಿಚಾರ. ವೀರಶೈವ, ಲಿಂಗಾಯತ ಎಂಬುದು ಶರಣ ಸಮಾಜವೆಂಬ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ನಮ್ಮ ಇಬ್ಬರ ಆಚಾರ, ವಿಚಾರದಲ್ಲಿ ವ್ಯತ್ಯಾಸವಿಲ್ಲ. ಅಂಗೈಯಲ್ಲಿ ಲಿಂಗವಿಟ್ಟು ಪೂಜಿಸುವ ನಾವೆಲ್ಲರೂ ವೀರಶೈವ ಲಿಂಗಾಯತರು. ಇದೇ ಈ ಎರಡು ದಿನಗಳ ಕಾರ್ಯಾಗಾರ ಮತ್ತು ಸಮಾವೇಶದ ಪ್ರಮುಖ ಉದ್ದೇಶ ಎಂದು ತಿಳಿಸಿದರು.


Spread the love

About Laxminews 24x7

Check Also

ಲಾರಿ, ಬೈಕ್​​ಗಳ ನಡುವೆ ಸರಣಿ ಅಪಘಾತ-ಸ್ಥಳದಲ್ಲೇ ಮೂವರು ಸವಾರರ ಸಾವು

Spread the loveತುಮಕೂರು: ಸರಣಿ ಅಪಘಾತದಲ್ಲಿ ಮೂವರು ಬೈಕ್ ಸವಾರರು ನಡುರಸ್ತೆಯಲ್ಲೇ ಪ್ರಾಣಬಿಟ್ಟಿರೋ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ