Breaking News

ನಾಯಿ ಆಸೆಗೆ ಬಂದು ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮದ ಜನ

Spread the love

ಹುಣಸೂರು : ಜನ ಜಾನುವಾರುಗಳನ್ನು ಕಾಡುತ್ತಿದ್ದ ಸುಮಾರು 3 ವರ್ಷದ ಹೆಣ್ಣು ಚಿರತೆ ಕೊನೆಗೂ ಬೋನಿನಲ್ಲಿ ಬಂಧಿಯಾಗಿದೆ.

ಹುಣಸೂರು ತಾಲೂಕಿನ ವಡ್ಡಂಬಾಳು ಗ್ರಾಮದ ಸಿದ್ದರಾಜು ಅವರ ಜಮೀನಿನಲ್ಲಿ ಚಿರತೆ ಬೋನಿಗೆ ಬಿದ್ದಿದೆ.

 

ಈ ಬಗ್ಗೆ ಗ್ರಾಮಸ್ಥರು ನೀಡಿದ ದೂರಿನ ಮೇರೆಗೆ ಸ್ಥಳ ಪರಿಶೀಲನೆ ನಡೆಸಿದ ಅರಣ್ಯಾಧಿಕಾರಿಗಳು ಸಿದ್ದರಾಜುರವರ ಜಮೀನಿನಲ್ಲಿ ಬೋನ್
ಇರಿಸಿ ನಾಯಿ ಕಟ್ಟಿ ಹಾಕಿದ್ದರು.

ಶನಿವಾರ ರಾತ್ರಿ ನಾಯಿ ಬೇಟೆಯಾಡುವ ಆಸೆಯಿಂದ ಬೋನ್ ಹೊಕ್ಕಿದ ಚಿರತೆಯು ಬೋನಿನಲ್ಲಿ ಬಂಧಿಯಾಗಿದೆ.

ಚಿರತೆ ಸೆರೆಯಾಗಿರುವ ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಸೆರೆ ಸಿಕ್ಕ ಚಿರತೆಯನ್ನು ನಾಗರಹೊಳೆ ಉದ್ಯಾನವನದ ಮೇಟಿಕುಪ್ಪೆ ವಲಯಕ್ಕೆ ಸಾಗಿಸಿ ಬಂಧಮುಕ್ತಗೊಳಿಸಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ