Home / ಜಿಲ್ಲೆ / ಬೆಳಗಾವಿ / ಗೋಕಾಕ / ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ :ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರ ಖಡಕ್ ಎಚ್ಚರಿಕೆ

ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ :ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರ ಖಡಕ್ ಎಚ್ಚರಿಕೆ

Spread the love

ಗೋಕಾಕ್‍ನಲ್ಲಿ ನಡೆಯುವ ಬೃಹತ್ ಪಂಚಮಸಾಲಿ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೌದು 2ಎ ಮೀಸಲಾತಿಗೆ ಆಗ್ರಹಿಸಿ ಗೋಕಾಕ್ ನಗರದ ನ್ಯೂ ಇಂಗ್ಲಿμï ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 1ಕ್ಕೆ ಬೃಹತ್ ಪಂಚಮಸಾಲಿ ಸಮಾವೇಶ ಆಯೋಜಿಸಲಾಗಿದೆ.
ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದ್ದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಶಾಸಕರಾದ ವಿನಯ್ ಕುಲಕರ್ಣಿ, ವಿಜಯಾನಂದ ಕಾಶಪ್ಪನವರ ಸೇರಿ ಹಲವರು ಭಾಗಿಯಾಗಲಿದ್ದಾರೆ.

ಇನ್ನು ಸಮಾವೇಶಕ್ಕೆ ಆಗಮಿಸುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್‍ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಹೋರಾಟದ ಹೊರತುಪಡಿಸಿ ಸತೀಶ್ ಜಾರಕಿಹೊಳಿ ಕುರಿತು ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಾನಸಿಕ ಅಸ್ವಸ್ಥ ಯತ್ನಾಳ್, ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಮಾತನಾಡಿದ ಹಾಗೇ ಇಲ್ಲಿ ಏನಾದ್ರೂ ಗೋಕಾಕ್‍ನಲ್ಲಿ ಮಾತನಾಡಿದರೆ ಗೋಕಾಕ್ ಬಿಟ್ಟು ಹೋಗುವುದು ಕಠಿಣ ಆಗುತ್ತೆ ಎಂದಿದ್ದಾರೆ.

2ಎ ಮೀಸಲಾತಿಗೆ ನಮ್ಮ ಸಂಪೂರ್ಣ ಬೆಂಬಲ ಇದೆ. ನೀನು ಬಂದೆ ಪುಟ್ಟ ಹೋದೆ ಪುಟ್ಟ ಅμÉ್ಟೀ ಇರಬೇಕು. ಅದನ್ನ ಬಿಟ್ಟು ಮಾತನಾಡಿದ್ರೇ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ. ನಮ್ಮ ಸಾಹುಕಾರ್ ಹೆಸರು ವೇದಿಕೆ ಮೇಲೆ ತೆಗೆದ್ರೇ ಇದು ನಿನಗೆ ಓಪನ್ ಚಾಲೆಂಜ್. ಧಮ್ ಇದ್ರೇ, ತಾಕತ್ ಇದ್ರೇ ನಮ್ಮ ಸಾಹುಕಾರ್ ಹೆಸರು ವೇದಿಕೆಯಲ್ಲಿ ತೆಗೆ ಆಮೇಲೆ ಇದೆ ನಿನಗೆ ಎಂದು ಸತೀಶ್ ಜಾರಕಿಹೊಳಿ ಬೆಂಬಲಿಗರು ಯತ್ನಾಳ್‍ಗೆ ನೇರವಾಗಿ ಚಾಲೆಂಜ್ ಹಾಕಿದ್ದಾರೆ.
ಅರಭಾವಿ ಆಯ್ತು, ಹುಕ್ಕೇರಿ ಆಯ್ತು ಇಂದು ಗೋಕಾಕ್‍ನಲ್ಲಿ ಪಂಚಮಸಾಲಿ ಸಮಾವೇಶಕ್ಕೆ ಸಿದ್ಧತೆ ನಡೆದಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿಸೆಂಬರ್ 12ರಂದು 25 ಲಕ್ಷ ಜನ ಸೇರಿಸಿ ಬೆಂಗಳೂರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಇದರ ಪೂರ್ವಭಾವಿಯಾಗಿ ತಾಲೂಕು ಮಟ್ಟದಲ್ಲಿ ಬೃಹತ್ ಪಂಚಮಸಾಲಿ ಸಮಾವೇಶ ಇಂದು ನಡೆಯಲಿದೆ


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ