Breaking News

ಲಾರಿ, ಟ್ರ್ಯಾಕ್ಟರ್, ಬೈಕುಗಳ ಮಧ್ಯೆ ಡಿಕ್ಕಿ; ಮೂವರಿಗೆ ಗಂಭೀರ ಗಾಯ

Spread the love

ಹಿರೇಬಾಗೇವಾಡಿ (ಬೆಳಗಾವಿ ಜಿಲ್ಲೆ): ಹಿರೇಬಾಗೇವಾಡಿ ಹೊರವಲಯದ ಘಾಟ್ ರಸ್ತೆಯಲ್ಲಿ ಭಾನುವಾರ ಲಾರಿ, ಟ್ರ್ಯಾಕ್ಟರ್ ಹಾಗೂ ಎರಡು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ತೀವ್ರ ಗಾಯಗೊಂಡಿದ್ದಾರೆ.

ಬೆಳಗಾವಿ ಕಡೆಯಿಂದ ಧಾರವಾಡ ಕಡೆಗೆ ಹೊರಟಿದ್ದ ಲಾರಿಯು ಖಡಿ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು.

ಈ ಎರಡೂ ವಾಹನಗಳು ರಸ್ತೆ ಪಕ್ಕದ ಎರಡು ಬೈಕುಗಳಿಗೆ ಡಿಕ್ಕಿ ಹೊಡೆದವು. ಒಂದಕ್ಕೂಂದು ಗುದ್ದಿದ ರಭಸಕ್ಕೆ ನಾಲ್ಕೂ ವಾಹನಗಳು ರಸ್ತೆ ಬದಿಗೆ ಉರುಳಿ ಬಿದ್ದವು. ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಮೂರು ತುಂಡಾಗಿದೆ. ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಒಬ್ಬ ಬೈಕ್ ಸವಾರ, ಟ್ರ್ಯಾಕ್ಟರ್ ಚಾಲಕ ಹಾಗೂ ಲಾರಿ ಚಾಲಕ ತೀವ್ರ ಗಾಯಗೊಂಡಿದ್ದಾರೆ. ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು.

ಇನ್ನಿಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ರಸ್ತೆ ಬದಿಯ ತಗ್ಗಿನಲ್ಲಿ ಲಾರಿ ಮುಂಭಾಗ ಕೆಳಗೆ ಮಾಡಿ ಬಿದ್ದಿದ್ದರಿಂದ ಅದರೊಳಗೆ ಸಿಲುಕಿಕೊಂಡ ಚಾಲಕನನ್ನು ಹೊರತೆಗೆಯಲು ಅರ್ಧ ತಾಸು ಕಷ್ಟಪಡಬೇಕಾಯಿತು. ಸ್ಥಳಕ್ಕೆ ಧಾವಿಸಿದ ಊರಿನ ಜನ ಹಗ್ಗಗಳನ್ನು ತಂದು ಲಾರಿಯ ಮುಂಭಾಗದ ಸರಳು, ಗಾಜು, ಕಟ್ಟಿಗೆ ಪಾರ್ಟ್ ಗಳನ್ನು ಕಿತ್ತು ವ್ಯಕ್ತಿಯನ್ನು ಹೊರತೆಗೆದರು.


Spread the love

About Laxminews 24x7

Check Also

ಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..!

Spread the loveಮುಂಬೈ ಬೀದಿಯಲ್ಲಿ ಪಾನಿಪೂರಿ ಮಾರುತ್ತಿದ್ದ ಹುಡುಗ ಇಂಗ್ಲೆಂಡ್’ನಲ್ಲಿ ಟೆಸ್ಟ್ ಶತಕ ಬಾರಿಸಿದ..! ಉತ್ತರ ಪ್ರದೇಶದ ಬದೋಹಿಯಲ್ಲೊಂದು ಪುಟ್ಟ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ