Breaking News

ಬೆಂಗಳೂರಿನ ವಿಮಾನ ನಿಲ್ದಾಣದ ಮೇಲೆ ಅದಾನಿ ಕಣ್ಣು!

Spread the love

ಬೆಂಗಳೂರು, ನ. 14: ಮಂಗಳೂರು, ಅಹಮದಾಬಾದ್, ಜೈಪುರ, ಗುವಾಹಟಿ ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗ ನಂತರ ಈಗ ಅದಾನಿ ಗ್ರೂಪ್ ಕಣ್ಣು ಬೆಂಗಳೂರು ವಿಮಾನ ನಿಲ್ದಾಣದ ಮೇಲೂ ಬಿದ್ದಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉಸ್ತುವಾರಿ, ಕಾರ್ಯ ನಿರ್ವಹಣೆ ಮಾಡುವ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಬಿಐಎಎಲ್) ಪಾಲನ್ನು ತೆಗೆದುಕೊಳ್ಳುವ ಬಗ್ಗೆ ಅದಾನಿ ಗ್ರೂಪ್ ಚಿಂತಿಸುತ್ತಿದೆ ಎಂದು ಈ ಬಗ್ಗೆ ತಿಳಿದಿರುವ ಉನ್ನತ ಮೂಲಗಳು ಮಾಹಿತಿ ನೀಡಿವೆ.

 

”ಅದಾನಿ ಗ್ರೂಪ್ ಕೆಲವು ಸಮಯದಿಂದ ವಿಮಾನ ನಿಲ್ದಾಣದಲ್ಲಿ ಪಾಲನ್ನು ಖರೀದಿಸಲು ಹಲವು ವಿಧಾನಗಳನ್ನು ಮೌಲ್ಯಮಾಪನ ಮಾಡುತ್ತಿದೆ. ಫೇರ್‌ಫ್ಯಾಕ್ಸ್‌ನೊಂದಿಗೆ ಚರ್ಚೆಗಳು ನಡೆದಿವೆ. ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದ (ಎಎಐ) ಬಿಡ್ಡಿಂಗ್‌ನಲ್ಲಿ ಭಾಗವಹಿಸಲು ಸಂಸ್ಥೆ ಉತ್ಸಾಹ ಹೊಂದಿದೆ” ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ – ಮೇ 4 ರಂದು ಫಲಿತಾಂಶ

Spread the loveನವದೆಹಲಿ: 4 ರಾಜ್ಯ  ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ಮುಹೂರ್ತ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು,ಕೇರಳ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ