Breaking News

ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ., ಕೋಲಾರದಿಂದ ಸ್ಪರ್ಧೆ ಮಾಡಿದರೂ ಸೋಲು ಖಚಿತ.: ಕಾರಜೋಳ

Spread the love

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಯಾವುದೇ ಕ್ಷೇತ್ರ ಸಿಗುವುದಿಲ್ಲ. ಅವರು ಯಾವುದೇ ಕ್ಷೇತ್ರದಿಂದ ಸ್ಪರ್ಧೆ ನಡೆಸಿದರೂ ಸೋಲುವುದು ಖಚಿತ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ್ ಕಾರಜೋಳ ಭವಿಷ್ಯ ನುಡಿದಿದ್ದಾರೆ.

ಸೋಮವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯನವರಿಗೆ ಕ್ಷೇತ್ರ ಸಿಗುವುದಿಲ್ಲ. ಕೋಲಾರದಿಂದ ಸ್ಪರ್ಧೆ ಮಾಡಿದರೂ ಅವರ ಸೋಲು ಖಚಿತ. ಕಾಂಗ್ರೆಸ್ ಮುಳುಗುವ ಹಡಗು.

ಕಾಂಗ್ರೆಸ್ ಪರಿಸ್ಥಿತಿ ಯಾವ ರೀತಿ ಬಂದಿದೆ ಎಂದರೆ ಸಿದ್ದರಾಮಯ್ಯ ಎಲ್ಲಿ ಸ್ಪರ್ಧೆ ಮಾಡಿದರೂ ಗೆಲುವು ಸಾಧಿಸುವುದಿಲ್ಲ.

ಚುನಾವಣೆ ಸಮೀಪಿಸುತ್ತಿದ್ದಂತೆ ಸಿದ್ದರಾಮಯ್ಯನವರು ಕ್ಷೇತ್ರ ಬದಲಾವಣೆ ಮಾಡುವುದು ಸ್ವಾಭಾವಿಕ ಎಂದು ಕುಟುಕಿದರು.


Spread the love

About Laxminews 24x7

Check Also

ಜೂನ್ 20-21ಕ್ಕೆ ಮತ್ತೆ 6 ಜಿಲ್ಲೆಗಳಿಗೆ ಮುಂಗಾರು ಚುರುಕು – ಯೆಲ್ಲೋ ಅಲರ್ಟ್

Spread the loveಜೂನ್ 20 ಹಾಗೂ 21 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿಗೆ ಭಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ