ಕಲಬುರಗಿ: ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ರಾಜ್ಯದಾದ್ಯಂತ ವಿವೇಕ ಹೆಸರಿನ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ವಿವೇಕರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡುವುದು ಕೇಸರೀಕರಣವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ವಿವೇಕರ ಹೆಸರಿನಲ್ಲಿ ಕೊಠಡಿ ನಿರ್ಮಾಣ ಮಾಡುವುದು ಕೇಸರೀಕರಣವಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.
ಕಲಬುರಗಿ ವಿಮಾನ ನಿಲ್ದಾಣದ ಬಳಿ ಇರುವ ಮಡಿಹಾಳ ಗ್ರಾಮದಲ್ಲಿ ಸೋಮವಾರ ವಿವೇಕ ಹೆಸರಿನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಹಲವು ಕಡೆಗಳಲ್ಲಿ ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಹೀಗಾಗಿ ರಾಜ್ಯ ಸರ್ಕಾರ 7601 ಶಾಲಾ ಹಾಗೂ ಕಾಲೇಜುಗಳ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದರು ಧರಿಸಿದ್ದು ಖಾವಿ, ರಾಷ್ಟ್ರಧ್ವಜದಲ್ಲಿರುವುದು ಕೇಸರಿ ಬಣ್ಣ. ಹಾಗಾಗಿ ನೂತನ ಕೊಠಡಿಗಳು ಕೇಸರಿ ಬಣ್ಣದಲ್ಲಿ ಇದ್ದರೆ ತಪ್ಪೇನು? ಈ ಯೋಜನೆಯನ್ನು ವಿರೋಧಿಸುವವರು ಅಭಿವೃದ್ಧಿಯನ್ನು ಸಹಿಸದವರು ಎಂದರು.