Breaking News

ಸಿದ್ದರಾಮಯ್ಯ ಅವರನ್ನು ಸ್ವಪಕ್ಷದವರೇ ಸೋಲಿಸುತ್ತಾರೆ: H.D.K.

Spread the love

ಬೆಂಗಳೂರು: ಮುಂಬರುವ ಚುನಾವಣೆಗೆ ಕೋಲಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಬಿಜೆಪಿ- ಜೆಡಿಎಸ್ ಮೈತ್ರಿಯ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಜೆಡಿಎಸ್‍ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರ ನಿವಾಸಕ್ಕೆ ಇಂದು ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಅವರು.

 

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಲು ಜೆಡಿಎಸ್‌ಗೆ ಬಿಜೆಪಿ ಬೆಂಬಲ ಎಂದು ಕೆಲವೆಡೆ ವರದಿ ಆಗಿದೆ. ಯಾವುದೇ ಕಾರಣಕ್ಕೂ ಆ ಪಕ್ಷದ ಜತೆ ಒಪ್ಪಂದ, ಮೈತ್ರಿ ಮಾಡಿಕೊಳ್ಳಲ್ಲ. ಬಿಜೆಪಿ ಜೊತೆ ಯಾವುದೇ ಚರ್ಚೆ ಆಗಿಲ್ಲ, ಮುಂದೆಯೂ ಆಗಲ್ಲ ಎಂದರು.

ಸಿದ್ದರಾಮಯ್ಯ ಅವರು ಕೋಲಾರದಲ್ಲೇ ನಿಲ್ಲಲಿ, ಬೇರೆ ಕಡೆ ನಿಲ್ಲಲಿ. ನಾವೇನು ಬಿಜೆಪಿ ಜತೆ ಸೇರಿ ಅವರ ವಿರುದ್ಧ ಕುತಂತ್ರ ಮಾಡಬೇಕಿಲ್ಲ. ಬಿಜೆಪಿಯವರಂತೆ ಸಣ್ಣ ಮಟ್ಟದದಲ್ಲಿ ನಾನು ಮಾತನಾಡುವುದಿಲ್ಲ. ನಾವು ಏನೇ ಮಾಡಿದರೂ ಸೋಲಿಸುವುದು, ಗೆಲ್ಲಿಸುವುದು ನಮ್ಮ ಕೈಯಲ್ಲಿ ಇರುವುದಿಲ್ಲ. ನಮಗೆ ಕೋಲಾರದಲ್ಲಿ ಸಮಸ್ಯೆಯೇ ಇಲ್ಲ.‌ ಪಕ್ಷದ ಅಭ್ಯರ್ಥಿ ಯಾರು ಅನ್ನುವ ನಿರ್ಣಯ ಆಗಿದೆ. ಬೇರೆ ಪಕ್ಷದ ಜತೆ ಸೇರಿ ತಂತ್ರಗಾರಿಕೆ ಮಾಡುವಂತದ್ದೇನೂ ಇಲ್ಲ ಎಂದು ಹೇಳಿದರು.

ಸಿದ್ದರಾಮಯ್ಯರನ್ನು ಅವರ ಪಕ್ಷದವರೇ ಸೋಲಿಸುತ್ತಾರೆ:

ಸಿದ್ದರಾಮಯ್ಯ ಅವರೇ ಆಗಲಿ, ಇನ್ನೊಬ್ಬರೇ ಬರಲಿ, ನಮಗೆ ಹೆದರಿಕೆ ಇಲ್ಲ. ಕೋಲಾರದಲ್ಲಿ ನಮ್ಮಲ್ಲಿ ಸಮರ್ಥ ಅಭ್ಯರ್ಥಿಗಳು ಇದ್ದಾರೆ‌. ಹೀಗೆ ಹೇಳಿದ ಕೂಡಲೇ ಸಿದ್ದರಾಮಯ್ಯ ಬಗ್ಗೆ ನಾವು ಸಾಫ್ಟ್ ಅಂತ ಅಲ್ಲ. ಎಲ್ಲರ ರೀತಿ ನಾವು ವೀರಾವೇಶದಿಂದ ಮಾತನಾಡುವುದು ಪ್ರಯೋಜನ ಇಲ್ಲ. ಎಲ್ಲಿ ಎನು ಕೆಲಸ ಮಾಡಬೇಕೊ ಮಾಡುತ್ತೇವೆ. ಸಿದ್ದರಾಮಯ್ಯ ಅವರನ್ನು ನಾವು ಸೋಲಿಸಬೇಕಿಲ್ಲ, ಅವರ ಪಕ್ಷದವರೇ ಸೋಲಿಸುತ್ತಾರೆ ಎಂದು ಬಗ್ಗೆ ಹೆಚ್ ಡಿಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಗೆ 3.15 ಕೋಟಿ ರೂಪಾಯಿ ವಂಚನೆ

Spread the loveಮಂಗಳೂರು: ಮಂಗಳೂರಿನ ಮಹಿಳೆಯೊಬ್ಬರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ನಡೆದ ಆನ್‌ಲೈನ್ ವಂಚನೆಯಲ್ಲಿ 3 ಕೋಟಿ 15 ಲಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ