Breaking News

ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿಯನ್ನೇ ಕಿಡ್ನ್ಯಾಪ್​ ಮಾಡಿದ್ರು! ಹುಬ್ಬಳ್ಳಿಯಲ್ಲಿ ಘಟನೆ

Spread the love

ಹುಬ್ಬಳ್ಳಿ: ಯುವತಿಯನ್ನು ಮಾತನಾಡಿಸಿದ ವಿದ್ಯಾರ್ಥಿಯನ್ನು ಅಪಹರಿಸಿದ ಘಟನೆ ಗೋಕುಲ‌ ರೋಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೋಕುಲ ರಸ್ತೆ ಅಕ್ಷಯ ಪಾರ್ಕ್‌ನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಜುನಾಥ ಎಂಬಾತ ಯುವತಿಯನ್ನು ಮಾತನಾಡಿಸಿದ್ದ.

ಇದೇ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಜಗಳವಾಗಿತ್ತು.

ಬಳಿಕ ನಾಲ್ವರು ಯುವಕರ ಗುಂಪು ವಿದ್ಯಾರ್ಥಿ ಮಂಜುನಾಥನನ್ನು ಅಪಹರಿಸಿ ಕುಸುಗಲ್ ರಸ್ತೆಯ ಮಿಡ್ ಮ್ಯಾಕ್ ಹಿಂಬದಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮನಸೋಇಚ್ಛೆ ಹಲ್ಲೆ ನಡೆಸಿದೆ. ಸುದ್ದಿ ತಿಳಿಯುತ್ತಿದ್ದಂತೆ ಕಾರ್ಯಾಚರಣೆ ನಡೆಸಿದ ಗೋಕುಲ ರಸ್ತೆ ಠಾಣೆಯ ಪೊಲೀಸರು ಅಪಹರಣಕ್ಕೊಳಗಾದ ವಿದ್ಯಾರ್ಥಿಯನ್ನು ಪತ್ತೆ ಮಾಡಿ ರಕ್ಷಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕೇಶ್ವಾಪುರ ತಳವಾರ ಓಣಿಯ ಮಹಮ್ಮದ್ ಗೌಸ್, ಶಬರಿನಗರದ ಸೋಹೆಲ್ ಬಂಧಿತರು. ಮತ್ತಿಬ್ಬರು ಆರೋಪಿಗಳಾದ ಪ್ರತೀಕ್ ಮತ್ತು ಸೌರಬ್​ ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ