ಕಲಬುರಗಿ: ಸೇಡಂ ಪಟ್ಟಣದಲ್ಲಿ ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಮಲ್ಲಿಕಾರ್ಜುನ್ ಮುತ್ಯಾಲ(64) ಕೊಲೆಯಾದವರು. ಬಿಜೆಪಿ ಮುಖಂಡರೂ ಆಗಿದ್ದ ಮಲ್ಲಿಕಾರ್ಜುನ್ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಅಂಗಡಿ ಮತ್ತು ಟಿವಿ ಶಾಪ್ ಇಟ್ಟುಕೊಂಡಿದ್ದರು.
ಎಲೆಕ್ಟ್ರಾನಿಕ್ ಅಂಗಡಿಯಲ್ಲೇ ಇಂದು(ಮಂಗಳವಾರ) ಮಲ್ಲಿಕಾರ್ಜುನ್ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಮರ್ಮಾಂಗಕ್ಕೆ ಚಾಕು ಇರಿದು, ಕತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸೇಡಂ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಕೊಲೆಗಾರರ ಪತ್ತೆಗೆ ಬಲೆ ಬೀಸಿದ್ದಾರೆ. ಸೇಡಂ ಕ್ಷೇತ್ರದ ಬಿಜೆಪಿ ಶಾಸಕ ರಾಜಕುಮಾರ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.