Breaking News

ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್​ ಹ್ಯಾಂಡ್​ ಆಗಿಯೇ ಎಸಿಬಿ ಅಧಿಕಾರಿಗಳ ಬಲೆ

Spread the love

ಬೆಂಗಳೂರು: ಪರಪ್ಪನ ಅಗ್ರಹಾರದ ಜೈಲಧಿಕಾರಿಗಳ ಲಂಚಾವತಾರ ಮತ್ತೊಮ್ಮೆ ಬಯಲಾಗಿದೆ. ಅಪರಾಧಿಯೊಬ್ಬನ ಪೆರೋಲ್​ ವಿಚಾರವಾಗಿ ಲಂಚ ಪಡೆಯುತ್ತಿದ್ದ ಕಾರಾಗ್ರಹದ ಸಿಬ್ಬಂದಿ ರೆಡ್​ ಹ್ಯಾಂಡ್​ ಆಗಿಯೇ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ತುಮಕೂರು ಮೂಲದ ಅಪರಾಧಿಯೊಬ್ಬರಿಗೆ 14 ವರ್ಷ ಜೈಲು ಶಿಕ್ಷೆ ನೀಡಿ ಸೆಷೆನ್ಸ್​ ನ್ಯಾಯಾಲಯ ತೀರ್ಪು ನೀಡಿತ್ತುಇತ್ತೀಚೆಗೆ ಈ ವ್ಯಕ್ತಿ ಪೆರೋಲ್ ಕೋರಿ ಕೇಂದ್ರ ಕಾರಾಗೃಹಕ್ಕೆ ಅರ್ಜಿ ಹಾಕಿದ್ದರು ಎನ್ನಲಾಗಿದೆ. ಈ ವೇಳೆ ಕಾರಾಗೃಹದ ಅಧೀಕ್ಷಕ ಜಯರಾಮ್ ಅಪರಾಧಿಯನ್ನು ಬಿಡುಗಡೆ ಮಾಡಲು 10 ಸಾವಿರ ಹಣ ಕೇಳಿದ್ದಾರಂತೆ. 5 ಸಾವಿರ ಹಣ ಮುಂಗಡವಾಗಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಹಣ ಕೊಡಲು ಇಷ್ಟವಿಲ್ಲದ ವ್ಯಕ್ತಿ ವಿಷಯವನ್ನು ತಮ್ಮ ಪತ್ನಿಗೆ ತಿಳಿಸಿದ್ದಾರಂತೆ. ಪತಿಯಿಂದ ವಿಚಾರ ತಿಳಿದ ಪತ್ನಿ ಕೂಡಲೇ ಎಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದ್ದು.. ಖಚಿತ ಮಾಹಿತಿ ಆಧರಿಸಿದ ಎಸಿಬಿ ಅಧಿಕಾರಿಗಳು ಜಯರಾಮ್​ ಸಜಾ ಬಂಧಿತನ ಪತ್ನಿಯಿಂದ 5 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್​​ ಹ್ಯಾಂಡ್​ ಆಗಿ ಹಿಡಿದಿದ್ದು, ಸದ್ಯ ಕಾರಾಗೃಹದ ಅಧೀಕ್ಷಕ ಜಯರಾಮ್ ನನ್ನು ಬಂಧಿಸಿರುವ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ