Breaking News

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಸರಕಾರದ ಹಂತಕ್ಕೆ

Spread the love

ಬೆಂಗಳೂರು: ಲೈಂಗಿಕ ಹಗರಣದಲ್ಲಿ ಸಿಲುಕಿರುವ ಮುರುಘಾ ಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಶರಣರು ಜೈಲು ಸೇರಿರುವ ಹಿನ್ನೆಲೆಯಲ್ಲಿ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ ಈಗ ಸರ್ಕಾರದ ಹಂತಕ್ಕೆ ತಲುಪಿದೆ.

ಮಠದ ಆಡಳಿತಾಧಿಕಾರಿ ನೇಮಕ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕಡತವನ್ನು ಸರ್ಕಾರ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದ್ದು, ಸರ್ಕಾರ ಶೀಘ್ರದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.

 

ಈ‌ ಕಡತ ಈಗ ಕಂದಾಯ ಇಲಾಖೆ ಕಾರ್ಯದರ್ಶಿ ಕಚೇರಿಯನ್ನು ತಲುಪಿದ್ದು, ಇಂದು ಅಥವಾ ನಾಳೆ ಮುಖ್ಯ ಕಾರ್ಯದರ್ಶಿಯವರಿಗೆ ಕಡತ ಮಂಡಿಸುವ ಸಾಧ್ಯತೆ ಇದೆ.

ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡುವ ವಿಚಾರದಲ್ಲಿ ಸರ್ಕಾರದ ಹಂತದಲ್ಲಿ ಪರ ಹಾಗೂ ವಿರೋಧ ಅಭಿಪ್ರಾಯ ಇದೆ ಎನ್ನಲಾಗಿದೆ. ಹೀಗಾಗಿ ನಿರ್ಧಾರಕ್ಕೆ ಕೊಂಚ ವಿಳಂಬವಾಗುತ್ತಿದೆ.


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ